Breaking News

ಮೊದಲ ಹಂತದ ಚಿತ್ರೀಕರಣ ಮುಗಿಸಿದ ಲೀಡರ್ ಚಿತ್ರತಂಡ


ಹಾರ್ದಿಕ್ ತರುಣ್ ಕಂಬೈನ್ಸ್ ಲಾಂಛನದಲ್ಲಿ ತರುಣ್ ಶಿವಪ್ಪ ಮತ್ತು ಹಾರ್ದಿಕ್ ಗೌಡ ಸೇರಿ ನಿರ್ಮಿಸುತ್ತಿರುವ, ಶಿವರಾಜ್ ಕುಮಾರ್ ನಾಯಕರಾಗಿ ನಟಿಸುತ್ತಿರುವ ಚಿತ್ರ ಲೀಡರ್. ಸತತ 20 ದಿನಗಳ ಕಾಲ ಬೆಂಗಳೂರಿನ ಸುತ್ತಮುತ್ತ ಮೊದಲನೇ ಹಂತದ ಚಿತ್ರೀಕರಣ ಮುಗಿಸಿರುವ ಲೀಡರ್ ಚಿತ್ರತಂಡ ಡಿಸೆಂಬರ್ 2ರಿಂದ ದ್ವಿತೀಯ ಹಂತದ ಚಿತ್ರೀಕರಣಕ್ಕೆ ಅಣಿಯಾಗುತ್ತಿದೆ.ರೋಸ್ ಚಿತ್ರ ಖ್ಯಾತಿಯ ಸಹನಾ ಮೂರ್ತಿ ನಿರ್ದೇಶನದಲ್ಲಿ ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ನಾಯಕರಾಗಿ ನಟಿಸುತ್ತಿರುವ ಲೀಡರ್ ಚಿತ್ರದಲ್ಲಿ ನಟ ಶ್ರೀನಗರ ಕಿಟ್ಟಿ ಮತ್ತು ಭಾವನಾ ಬೆಳೆಗೆರೆ ದಂಪತಿಯ ಪುತ್ರಿ ಪುಟಾಣಿ ಪರಿಣಿತ ಅಭಿನಯಿಸುತ್ತಿದ್ದಾಳೆ.
ಶಿವರಾಜ್‍ಕುಮಾರ್ ಮಗಳ ಪಾತ್ರದಲ್ಲಿ ಪರಿಣಿತ ಕಾಣಿಸಿಕೊಳ್ಳುತ್ತಿರುವುದು ವಿಶೇಷ. ಇದಲ್ಲದೆ, ಲೀಡರ್ ಚಿತ್ರದಲ್ಲಿ ಶಿವರಾಜ್ ಕುಮಾರ್ ಅವರ ಜೊತೆಗೆ ವಿಜಯ್ ರಾಘವೇಂದ್ರ, ಗುರು ಜಗ್ಗೇಶ್ ಕೂಡಾ ಅಭಿನಯಿಸುತ್ತಿದ್ದಾರೆ ಮತ್ತು ಪ್ರಣೀತ ನಾಯಕಿಯಾಗಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಲೂಸ್ ಮಾದ ಯೋಗಿ ಕೂಡಾ ಶಿವರಾಜ್ ಕುಮಾರ್ ಅವರೊಟ್ಟಿಗೆ ಪರದೆ ಹಂಚಿಕೊಳ್ಳುತ್ತಿದ್ದಾರೆ. ಪ್ರಕಾಶ್ ಬೆಳವಾಡಿ ಅವರು ಈ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಇದಲ್ಲದೆ, ಶಿವಣ್ಣನ ತಂಗಿಯ ಪಾತ್ರದಲ್ಲಿ ಕ್ರೇಜಿ ಬಾಯ್ ಖ್ಯಾತಿಯ ಆಶಿಕಾ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ವೀರ ಸಮರ್ಥ್ ಸಂಗೀತ, ಗುರುಪ್ರಶಾಂತ್ ರೈ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನವಿದೆ.

No comments