Breaking News

ಭಾರತ್ ಬಂದ್‌ ವಿರುದ್ದ ತಿರುಗಿ ಬಿದ್ದ ಕಾಂಗ್ರೆಸ್ ಕಾರ್ಯಕರ್ತರು...!ಮಂಡ್ಯ:500, 1000 ರೂ. ನೋಟು ಬ್ಯಾನ್ ವಾಪಸ್ ಗೆ ಆಗ್ರಹಿಸಿ ಸೋಮವಾರ ಕರೆ ನೀಡಿರುವ‌ ಭಾರತ್ ಬಂದ್ ಅನ್ನು ಯಶಸ್ವಿಗೊಳಿಸಲು ಕಾಂಗ್ರೆಸ್ ಹೈ ಕಮಾಂಡ್ ಸೂಚನೆ ಕೊಟ್ಟ ಹಿನ್ನೆಲೆಯಲ್ಲಿ ಮಾಜಿ ಸಂಸದ ರಮ್ಯಾ ಭಾರತ್ ಬಂದ್ ಸಂಭಂದ ಕರೆದಿದ್ದ ಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರೇ ಸಿದ್ದರಾಮಯ್ಯ  ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಮಂಡ್ಯದಲ್ಲಿ ಶುಕ್ರವಾರ ನಡೆದಿದೆ.

ಸೋಮವಾರ ಭಾರತ್ ಬಂದ್ ಹಾಗೂ ಪ್ರತಿಭಟನೆ ನಡೆಸುವ ಸಂಭದ ಮಂಡ್ಯದಲ್ಲಿ ಮಾಜಿ ಸಂಸದೆ ರಮ್ಯಾ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಆತ್ಮಾನಂದರ ನೇತೃತ್ವದಲ್ಲಿ ಕಾರ್ಯಕರ್ತರ ಸಭೆ ಕರೆದಿದ್ದರು.

ಸಭೆಯಲ್ಲಿ ಬಂದ್ ವಿಚಾರದಲ್ಲಿ ಕಾರ್ಯಕರ್ತರು ನೇರವಾಗಿಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅಸಮಾಧಾನ ಹೊರಹಾಕಿ, ರಮ್ಯಾ ಹಾಗೂ ಆತ್ಮಾನಂದರಿಗೆ ಕ್ಲಾಸ್ ತೆಗೆದುಕೊಂಡಿರುವುದಾಗಿ ಖಾಸಗಿ ಟಿವಿ ಚಾನೆಲ್ ವರದಿ ಮಾಡಿದೆ.

No comments