Breaking News

ಮತ್ತೆ ಕದಮ ವಿರಾಮ ಉಲ್ಲಂಘಿಸಿದ ಪಾಕ್, ಗಡಿಯಲ್ಲಿ ಗುಂಡಿನ ಚಕಮಕಿ ಒರ್ವ ಯೋಧ ಹುತಾತ್ಮ ನಾಲ್ವರಿಗೆ ಗಾಯಸೋಮವಾರ ಮತ್ತೆ ಕದನ ವಿರಾಮ ಉಲ್ಲಂಘಿಸಿದ ಪಾಕಿಸ್ತಾನ ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರ ರೇಖೆ ಬಳಿ ಪಾಕ್ ಸೈನಿಕರು ನಡೆಸಿದ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ಓರ್ವ ಬಿಎಸ್ಎಫ್ ಯೋಧ ಹಾಗೂ ಮೂವರು ಭದ್ರತಾ ಸಿಬ್ಬಂದಿ ಸೇರಿದಂತೆ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಡಿ ಜಿಲ್ಲೆಗಳಾದ ಪೂಂಚ್ ಮತ್ತು ರಾಜೋರಿಯಲ್ಲಿ ಭಾರತೀಯ ಪೋಸ್ಟ್ ಗಳನ್ನು ಗುರಿಯಾಗಿಸಿಕೊಂಡು ಪಾಕ್ ಸೇನೆ ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ ನಾಲ್ವರು ಬಿಎಸ್ ಎಫ್ ಯೋಧರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಬಿಎಸ್ಎಫ್ ಅಧಿಕಾರಿ ತಿಳಿಸಿದ್ದಾರೆ.
ನಾಲ್ವರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆ ಪೈಕಿ ಬಿಎಸ್ಎಫ್ ಮುಖ್ಯ ಪೇದೆ ರಾಯ್ ಸಿಂಗ್ ಅವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಹುತಾತ್ಮ ಯೋಧ ಹರಿಯಾಣದ ಜಜ್ಜರ್ ಜಿಲ್ಲೆಯವರಾಗಿದ್ದು, ಪತ್ನಿ, ಮೂವರು ಮಕ್ಕಳು ಹಾಗೂ ತಾಯಿಯನ್ನು ಅಗಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಪಾಕಿಸ್ತಾನದ ಅಪ್ರಚೋದಿತ ಗುಂಡಿನ ದಾಳಿ ಭಾರತ ಸಹ ತಕ್ಕ ಪ್ರತ್ಯುತ್ತರ ನೀಡುತ್ತಿದೆ ಎಂದು ಬಿಎಸ್ ಎಫ್ ಅಧಿಕಾರಿ ಹೇಳಿದ್ದಾರೆ.
Source

No comments