Breaking News

ಕಲಾಪಗಳಲ್ಲಿ ಪಾಲ್ಗೊಳ್ಳಲು ಶಾಸಕರಿಂದ ನಿರಾಸಕ್ತಿ ?


ಬೆಳಗಾವಿ : ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಿ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಕರೆದಿರುವ ವಿಧಾನಸಭೆಯ ಚಳಿಗಾಲದ ಅಧಿವೇಶನದಲ್ಲಿ ಶಾಸಕರ ಗೈರು ಹಾಜರಿ ಹೆಚ್ಚಾಗಿದ್ದು, ಕಲಾಪಗಳಲ್ಲಿ ಪಾಲ್ಗೊಳ್ಳಲು ಶಾಸಕರಿಂದ ನಿರಾಸಕ್ತಿ ವ್ಯಕ್ತವಾಗುತ್ತಿರುವುದು ದುರಂತ ವೆಂದೇ ಹೇಳಬಹುದು ,
ರಾಜ್ಯವನ್ನು ಆವರಿಸಿರುವ ತೀವ್ರ ಬರಗಾಲ , ಮಹದಾಯಿ ಜಲವಿವಾದ ಪ್ರಮುಖ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಮಹತ್ವದ ಚರ್ಚೆಗಳು ಆಗಬೇಕಾದ  ಸಂದರ್ಭದಲ್ಲೂ ನಿರೀಕ್ಷಿತ ಸಂಖ್ಯೆಯಲ್ಲಿ ಶಾಸಕರುಗಳು ಪಾಲ್ಗೊಳ್ಳದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

No comments