ಅಮಿತ್ ಷಾ ಒಬ್ಬ ಕೊಲೆ ಗಡುಕ : ಸಿದ್ದರಾಮಯ್ಯ
ಕರ್ನಾಟಕ ಬಿಜೆಪಿ ಆಯೋಜಿಸಿದ ಹಿಂದುಳಿದ ವರ್ಗದ ಸಮಾವೇಶದಲ್ಲಿ ಭಾಗವಹಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಕರ್ನಾಟಕದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಅನ್ನು ಕಿತ್ತೊಗೆಯಲು ಕರೆನೀಡಿದ್ದರು ,ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿರುಗೇಟು ನೀಡಿದ್ದಾರೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಗರದ ಅರಮನೆ ಮೈದಾನದಲ್ಲಿ ನಡೆದ ಐಟಿ ಕ್ವಿಜ್ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊಲೆ ಆರೋಪಿಗಳಿಗೆ ಕಾಂಗ್ರೆಸ್ ಪಕ್ಷ ಮತ್ತು ಸರ್ಕಾರಗಳನ್ನು ಟೀಕಿಸುವ ನೈತಿಕ ಹಕ್ಕು ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು
, ಮೋದಿ ಪ್ರಧಾನಿಯಾಗಿರದಿದ್ದರೆ ಷಾ ಜೈಲಿನಲ್ಲಿ ಇರಬೇಕಾಗಿತ್ತು ಎಂದು ಕಿಡಿಕಾರಿದ್ದಾರೆ.
ಕಾಂಗ್ರೆಸ್ `ಬಂದ್’ಗೆ ಕರೆ ನೀಡಿಯೇ ಇಲ್ಲ, ಆದರೂ ಬಿಜೆಪಿ ಮುಖಂಡರು ಅನಗತ್ಯವಾಗಿ ಸಂಭ್ರಮ ಆಚರಿಸಿ ಸಿಹಿ ಹಂಚುತ್ತಿದ್ದಾರೆ ಎಂದು ಟೀಕಿಸಿದರು.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ವಿರುದ್ಧವೂ ಗದಾ ಪ್ರಹಾರ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಹದಾಯಿ, ಕಾವೇರಿ ವಿಚಾರದಲ್ಲಿ ಬಾರಿ ಅನ್ಯಾಯವಾಗಿದೆ ಎಂದು ಹೋದಲೆಲ್ಲಾ ಹೇಳುವ ಬಿಎಸ್‌ವೈ ಅವರು, ಮುಖ್ಯಮಂತ್ರಿಯಾಗಿದ್ದಾಗ ಈ ವಿವಾದ ಬಗೆಹರಿಸಲಿಲ್ಲವೇಕೆ ಎಂದು ಪ್ರಶ್ನಿಸಿದರು
ಮಹದಾಯಿ ಟ್ರಿಬುನಲ್ ಮಂಡಳಿ ರಚನೆ ಆಗಿದ್ದೆ ಅವರ ಕಾಲದಲ್ಲೇ ಎಂಬುದನ್ನು ಬಿ.ಎಸ್.ವೈ ಮರೆತಂತಿದೆ ಎಂದು ಬಿ.ಎಸ್.ವೈ ಅನ್ನು ಕೆಣಕಿದರು
No comments