ಕಾರ್ಕಳ ತಾಲೂಕಿನ ಬೈಲೂರು ಗ್ರಾಮದಲ್ಲಿ ಮಂಗಳೂರು ಮೂಲದ ಮೂವರು ಕಾರಿನಲ್ಲಿ ಹಣವನ್ನು ಸಾಗಿಸುತ್ತಿದ್ದ ಸಂಧರ್ಭದಲ್ಲಿ ಪೊಲೀಸರು ದಾಳಿ ನಡೆಸಿ ದಾಖಲೆ ಇಲ್ಲದ 2000 ರೂಪಾಯಿ ಮುಖಬೆಲೆಯ 71 ಲಕ್ಷ ರೂಪಾಯಿ ಹಣವನ್ನು ವಶಕ್ಕೆ ಪಡೆದಿದ್ದರೆ ಎಂದು ತಿಳಿದು ಬಂದಿದೆ. ಬಂಧಿತ ಆರೋಪಿಗಳು ಇಮ್ರಾನ್, ಆಸೀಫ್ ಮತ್ತು ದೀಪಕ್ ಎಂದು ಗುರುತಿಸಲಾಗಿದೆ. ಹಣದ ಮೂಲದ ಬಗ್ಗೆ ತೀವ್ರ ವಿಚಾರಣೆ ನಡೆಸಿ ಪ್ರಕರಣವನ್ನು ಮಂಗಳೂರು ಐಟಿ ವಿಭಾಗಕ್ಕೆ ವರ್ಗಾಯಿಸಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ
No comments