Breaking News

ವಿನಾಯಕ ಬಾಳಿಗಾ ಕೊಲೆ ಪ್ರಕರಣ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ನೇಮಿಸಿದ ಸರಕಾರ

ಮಂಗಳೂರು : ರಾಜ್ಯ ಸರ್ಕಾರ ಆರ್.ಟಿ.ಐ ಕಾರ್ಯಕರ್ತ ವಿನಾಯಕ ಬಾಳಿಗಾ ಕೊಲೆ ಪ್ರಕರಣ  ಸಂಬಂಧಿಸಿ ನ್ಯಾಯಾಲದಲ್ಲಿ ವಾದ ಮಂಡಿಸಲು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್  ವಕೀಲ ರವೀಂದ್ರನಾಥ್ ಕಾಮತ್ ಅವರನ್ನು ನೇಮಿಸಿದೆ.

ಮಾರ್ಚ್ 21 ರಂದು ವಿನಾಯಕ್ ಬಾಳಿಗಾ ಅವರನ್ನು ಮಾರಕಾಸ್ತ್ರಗಳಿಂದ  ತನ್ನ ಮನೆಯ ಸಮೀಪ ಹತ್ಯೆ ಮಾಡಲಾಗಿತ್ತು . ಪ್ರಕರಣಕ್ಕೆ ಸಂಬಂಧಿಸಿದಂತೆ ಯುವ ಬ್ರಿಗೇಡ್ ಸಂಸ್ಥಾಪಕ ನರೇಶ್ ಶೆಣೈ ಸೇರಿ ಮೂವರು ಆರೋಪಿಗಳನ್ನು ಬಂಧಿಸಲಾಗಿತ್ತು. ವಿನಾಯಕ ಬಾಳಿಗಾ ಕೊಲೆ ಪ್ರಕರಣದ ತನಿಖೆಯು ನಿಧಾನಗತಿಯಲ್ಲಿ ಸಾಗುತ್ತಿರುವ ಕುರಿತು ಬಾಳಿಗಾ ಅವರ ಕುಟುಂಬದ ಸದಸ್ಯರು ಸರ್ಕಾರದ ಮುಂದೆ ಅಸಮಾಧಾನ ವ್ಯಕ್ತಪಡಿಸಿದ್ದರು.


ಕುಟುಂಬ ಸದಸ್ಯರ ಕೊರಿಕೆಯ ಮೇರೆಗೆ ಕರ್ನಾಟಕ ಸರ್ಕಾರದ ಆಂತರಿಕ ಆಡಳಿತ ಮಂಡಳಿ ಕಾರ್ಯದರ್ಶಿ ಬಿ ಎನ್ ಕೃಷ್ಣಯ್ಯ ಅವರು  ನ್ಯಾಯಾಲಯದಲ್ಲಿ ವಾದ ಮಂಡಿಸಲು  ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್  ವಕೀಲ ರವೀಂದ್ರನಾಥ್ ಕಾಮತ್ ಅವರನ್ನು ನೇಮಿಸಿದ್ದಾರೆ ಎಂದು ತಿಳಿದುಬಂದಿದೆ.

No comments