ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿಯಾಗಿ ಚಿನ್ನಮ್ಮ
ಚೆನ್ನೈ : ತಮಿಳುನಾಡಿನ ಮಾಜಿ ಮುಖ್ಯ ಮಂತ್ರಿ ಆಪ್ತರ ವಲಯದಲ್ಲಿ ಗುರುತಿಸಿಕೊಂಡಿರುವ ಚಿನ್ನಮ್ಮ ಖ್ಯಾತಿಯ ಶಶಿಕಲಾ ನಟರಾಜನ್ ಅವರನ್ನು ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲು ಪಕ್ಷವು ಒಕ್ಕೊರಲ ನಿರ್ಣಯ ಕೈಗೊಂಡಿದೆ. ಚೆನ್ನೈನ ಶ್ರೀವಾರಿ ವೆಂಕಟಾಚಲಪತಿ ಕಲ್ಯಾಣಮಂಟಪಂನಲ್ಲಿ ಇಂದು ನಡೆದ ಆಡಳಿತರೂಢ ಎಐಎಡಿಎಂಕೆ ಜನರಲ್ ಕೌನ್ಸಿಲ್ ಸಭೆ ನಡೆಯಿತು. ಸಭೆ ಆರಂಭವಾಗುತ್ತಿದ್ದಂತೆ ಪುರುಚ್ಚಿ ತಲೈವಿ ಜಯಲಲಿತಾರಿಗೆ ಸಭೆಯಲ್ಲಿ ಶ್ರದ್ದಾಂಜಲಿ ಸಲ್ಲಿಸುವ ನಿರ್ಣಯ ಅಂಗೀಕರಿಸಿ ಅವರ ಗೌರವಾರ್ಥ ಮೌನ ಆಚರಿಸಲಾಯಿತು. ನಂತರ ನಡೆದ ಕಲಾಪದಲ್ಲಿ ಶಶಿಕಲಾ ನಟರಾಜನ್ ಅವರನ್ನು ಪಕ್ಷದ ಪ್ರಧಾನ ಕಾರ್ಯದರ್ಶಿಯನ್ನಾಗಿ ಆಯ್ಕೆಗೊಳಿಸುವ ಗೊತ್ತುವಳಿಯನ್ನು ಅಂಗೀಕರಿಸಲಾಯಿತು.
ಶಶಿಕಲಾ ಗೈರು ಹಾಜರಾಗಿದ್ದ ಸಭೆಯಲ್ಲಿ ಪಕ್ಷದ ಕೋಶಾಧ್ಯಕ್ಷರೂ ಆಗಿರುವ ಮುಖ್ಯಮಂತ್ರಿ ಓ.ಪನ್ನೀರ್‍ಸೆಲ್ವಂ ಮತ್ತು ಪಕ್ಷದ ಹಿರಿಯ ನಾಯಕ ಇ. ಮಧುಸೂದನನ್ ಸೇರದಂತೆ ಹಿರಿಯ ಸಚಿವರು, ಪಕ್ಷದ ಮುಖಂಡರು ಹಾಜರಿದ್ದರು. ಶಶಿಕಲಾ ನಟರಾಜನ್ ಅವರನ್ನು ಪಕ್ಷದ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡುವ ನಿರ್ಣಯವನ್ನು ಸಭೆಯಲ್ಲಿ ಮಂಡಿಸಲಾಯಿತು.
No comments