Breaking News

ನನ್ನ ಹೆಸರನ್ನು ಅನಗತ್ಯವಾಗಿ ಪ್ರಸ್ತಾಪಿಸಲಾಗುತ್ತಿದೆ : ಕೆ.ಜೆ. ಜಾರ್ಜ್


ಬೆಂಗಳೂರು:ರಾಜ್ಯದ  ಇಬ್ಬರು ಭ್ರಷ್ಟ ಅಧಿಕಾರಿಗಳಿಂದ ಆದಾಯ ತೆರಿಗೆ ಅಧಿಕಾರಿಗಳು ದಾಳಿ ಮಾಡಿ ಅಪಾರ ಪ್ರಮಾಣದ ಚಿನ್ನ ಮತ್ತು ನಗದು ವಶಪಡಿಕೊಂಡ ನಂತರದ ಬೆಳವಣಿಗೆಯಲ್ಲಿ ಭ್ರಷ್ಟ ಅಧಿಕಾರಿಗಳ ಪಟ್ಟಿಯಲ್ಲಿ ತಮ್ಮ ಹೆಸರು ಇದೆ ಎಂದು ಮಾಧ್ಯಮಗಳು ಪ್ರಕಟಿಸುತ್ತಿರುವ ವರಧಿಯನ್ನು ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್  ಅಲ್ಲಗಳೆದಿದ್ದಾರೆ .ಯಾವುದೇ ಹುರುಳಿಲ್ಲದ ವರಧಿಗಳು  ಆಧಾರರಹಿತವಾದದ್ದು  ಅನಗತ್ಯವಾಗಿ ನನ್ನ ಹೆಸರನ್ನು ಪ್ರಸ್ತಾಪಿಸಲಾಗುತ್ತಿದೆ ಎಂದು ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಅಸಮಾಧಾನ ವ್ಯಕ್ತಪಡಿಸಿದರು
ಸಚಿವ ಎಚ್.ವೈ. ಮೇಟಿ ಅವರ ರಾಸಲೀಲೆ ಪ್ರಕರಣದ ಬಗ್ಗೆ ಕಾನೂನಿನಂತೆ ಮುಖ್ಯಮಂತ್ರಿಗಳು ಕ್ರಮ ತೆಗೆದುಕೊಳ್ಳುತ್ತಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಉತ್ತರ ನೀಡುತ್ತಾರೆ. ತಪ್ಪು ಯಾರೇ ಮಾಡಿರಲಿ ತಪ್ಪೇ ಎಂದು ಸಚಿವ ಜಾರ್ಜ್ ಹೇಳಿದರು.


No comments