Breaking News

ಸಿಎಂ ಆಪ್ತರ ಹಗರಣಗಳನ್ನು ಬಯಲಿಗೆಳಿಯುವೆ ಬಿಎಸ್‌ವೈ


ಬೆಂಗಳೂರು :ಕರ್ನಾಟಕ ಕಾಂಗ್ರೆಸ್ ವಿರುದ್ಧ ಚಾಟಿ ಬಿಸಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಯಡಿಯೂರಪ್ಪ ನವರು  ಐಟಿ ದಾಳಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತರು ಸಿಕ್ಕಿಬಿದ್ದಿರುವುದು ಕಾಂಗ್ರೆಸ್ ಸರ್ಕಾರದ ಭ್ರಷ್ಟತೆಗೆ ಹಿಡಿದ ಕೈಗನ್ನಡಿಯಾಗಿದೆ ಎಂದರು ಮುಂಬರುವ ದಿನಗಳಲ್ಲಿ ರಾಜ್ಯ ಸರ್ಕಾರದ ಮತ್ತು ಸಿಎಂ ಆಪ್ತರ  ಭ್ರಷ್ಟಾಚಾರದ ದಾಖಲೆಗಳನ್ನು ಬಹಿರಂಗಗೊಳಿಸುವುದಾಗಿ ಯಡಿಯೂರಪ್ಪ ಹೇಳಿದರು.ರಾಜ್ಯದ ಕಾಂಗ್ರೆಸ್ ಸರ್ಕಾರ ನಡೆಸಿರುವ ಭ್ರಷ್ಟಾಚಾರದ ದಾಖಲೆಗಳು ಬಿಜೆಪಿಗೆ ದೊರೆತಿವೆ. ಸದ್ಯದಲ್ಲೇ ಆ ದಾಖಲೆಗಳನ್ನು ಬಿಡುಗಡೆ ಮಾಡಿ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರವನ್ನು ಜನರ ಮುಂದಿಡುವುದಾಗಿ ಹೇಳಿದರು.ಈ ಸರ್ಕಾರ ಭ್ರಷ್ಟ ಅಧಿಕಾರಿಗಳಿಗೆ ರಕ್ಷಣೆ ನೀಡುತ್ತಿರುವುದು ಬಯಲಾಗಿದೆ ಎಂದು ಅವರು ಸುದ್ದಿಗೋಷ್ಠಿಯಲ್ಲಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

No comments