Breaking News

ಮಂಗಳೂರು SCDCC ಬ್ಯಾಂಕ್ ಮೇಲೆ ಐಟಿ ದಾಳಿ



ಮಂಗಳೂರು :  ದಕ್ಷಿಣ ಕನ್ನಡ ಜಿಲ್ಲಾ ಸೇವಾ ಸಹಕಾರಿ ಬ್ಯಾಂಕ್‌ನ ಪ್ರಧಾನ ಕಚೇರಿಯ ಮೇಲೆ ಮಂಗಳವಾರ ಐಟಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. 
ಕಪ್ಪು ಹಣವನ್ನು ಬಿಳಿ ಮಾಡಿಕೊಡುವ ದಂಧೆಯಲ್ಲಿ ಬ್ಯಾಂಕ್‌ ತೊಡಗಿದೆ ಎನ್ನುವ ಆರೋಪ ಕೇಳಿ ಬಂದ ಹಿನ್ನಲೆಯಲ್ಲಿ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದು ಕಚೇರಿಯ ಮುಖ್ಯ ದ್ವಾರವನ್ನು ಬಂದ್‌ ಮಾಡಿ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ 
ನೋಟು ಅಪನಗದೀಕರಣವಾದ ಬಳಿಕ 5 ದಿನಗಳಲ್ಲಿ  ಬ್ಯಾಂಕ್‌ನಲ್ಲಿ  386 ಕೋಟಿ ರೂಪಾಯಿ ವ್ಯವಹಾರ ನಡೆದಿತ್ತು ಎಂದು ಆರೋಪ ಕೇಳಿ ಬಂದಿತ್ತು. 


No comments