Breaking News

ದಲಿತ ಅನ್ನೋ ಕಾರಣಕ್ಕೆ ಕೇಂದ್ರ ಸರ್ಕಾರ ನನ್ನನು ಟಾರ್ಗೆಟ್ ಮಾಡುತಿದೆ ಮಾಯಾವತಿ


ನವದೆಹಲಿ : ಬಹುಜನ ಸಮಾಜ ಪಕ್ಷದ ಖಾತೆಯಲ್ಲಿ 104 ಕೋಟಿ ರೂ. ಠೇವಣಿಯನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಪತ್ತೆ ಮಾಡಿರುವ ಪ್ರಕರಣದ ಬಗ್ಗೆ ಕೆಂಡಾಮಂಡಲವಾಗಿರುವ ಪಕ್ಷದ ನಾಯಕಿ ಮತ್ತು ಮಾಜಿ ಮುಖ್ಯಮಂತ್ರಿ ಮಾಯಾವತಿ, ಮುಂಬರುವ ಉತ್ತರಪ್ರದೇಶ ಚುನಾವಣೆಗಳ ಹಿನ್ನೆಲೆಯಲ್ಲಿ ಪಕ್ಷಕ್ಕೆ ಮಸಿ ಬಳಿಯಲು ಕೇಂದ್ರ ಸರ್ಕಾರ ಆಡಳಿತ ಯಂತ್ರವನ್ನು ದುರುಪಯೋಗ ಮಾಡಿಕೊಂಡಿದೆ ಎಂದು ಕಿಡಿಕಾರಿದ್ದಾರೆ. ಲಖನೌನಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೋಟು ನಿಷೇಧಕ್ಕೂ ಮುನ್ನವೇ ಪಕ್ಷದ ಖಾತೆಗಳಲ್ಲಿ ಹಣ ಜಮೆ ಮಾಡಲಾಗಿದೆ. ನಾವು ಕಾನೂನು-ನಿಯಮಗಳನ್ನು ಪಾಲಿಸಿದ್ದೇವೆ. ಇದರಲ್ಲಿ ಯಾವುದೇ ಅಕ್ರಮ ನಡೆದಿಲ್ಲ. ಆದರೂ, ದಲಿತರನ್ನು ಗುರಿಯಾಗಿರಿಸಿಕೊಂಡು ಕೇಂದ್ರ ಸರ್ಕಾರ ವಿನಾಕಾರಣ ತೊಂದರೆಗೆ ಸಿಲುಕಿಸುತ್ತಿದೆ ಎಂದು ಹರಿಹಾಯ್ದರು.

No comments