Breaking News

ಮತ್ತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಜಯಕರ್ನಾಟಕ ಸಂಸ್ಥಾಪಕ ಮುತ್ತಪ್ಪ ರೈ.

ಬೆಂಗಳೂರು : ಉದ್ಯಮಿ, ಜಯಕರ್ನಾಟಕ ಸಂಘಟನೆಯ ಸಂಸ್ಥಾಪಕ ಮುತ್ತಪ್ಪ ರೈ ಎರಡನೇ ಮದುವೆಯಾಗಿದ್ದಾರೆ. ಬಿಡದಿಯ ನಿವಾಸದಲ್ಲಿ ಸಕಲೇಶಪುರ ಮೂಲದ ಅನುರಾಧಾ ಅವರನ್ನು ಕುಟುಂಬಸ್ತರು ಹಾಗೂ ಆಪ್ತರ ಸಮ್ಮುಖದಲ್ಲಿ ಶಾಸ್ತ್ರೋಕ್ತವಾಗಿ ಮದುವೆಯಾಗಿದ್ದಾರೆ.
ಮುತ್ತಪ್ಪ ರೈ ಮೊದಲ ಪತ್ನಿ ರೇಖಾ ರೈ 2013 ಏಪ್ರಿಲ್ 28ರಂದು ಅನಾರೋಗ್ಯದ ಕಾರಣದಿಂದ ಸಿಂಗಾಪುರದಲ್ಲಿ ನಿಧನರಾಗಿದ್ದರು. ದಂಪತಿಗೆ ಇಬ್ಬರು ಪುತ್ರರಿದ್ದು ಇಬ್ಬರಿಗೂ ಮದುವೆಯಾಗಿದೆ.
ಅನುರಾಧಾ ಸಕಲೇಶಪುರ ಮೂಲದವರಾಗಿದ್ದು ಬೆಂಗಳೂರಿನಲ್ಲಿ ಉದ್ಯಮಿಯಾಗಿದ್ದಾರೆ.  ಇವರಿಗೂ ಈ ಹಿಂದೆ ಮದುವೆಯಾಗಿದ್ದು ಇಬ್ಬರು ಮಕ್ಕಳಿದ್ದಾರೆ. ಪತಿ ತೀರಿಕೊಂಡಿದ್ದು ಇದೀಗ ಎರಡನೇ ಮದುವೆಯಾಗುವ ಮೂಲಕ ಹೊಸ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

No comments