Breaking News

4 ನೇ ತರಗತಿ ಬಾಲಕಿಯ ಮೇಲೆ ಅತ್ಯಾಚಾರ ಯತ್ನ ಆರೋಪಿಯ ಬಂಧನ


ಬೆಳ್ತಂಗಡಿ : 4 ನೇ ತರಗತಿಯ ಅಪ್ರಾಪ್ತ ಬಾಲಕಿಯ ಮೇಲೆ ಆತ್ಯಾಚಾರ ಯತ್ನ ನಡೆಸಿದ ಘಟನೆ ಬೆಳ್ತಂಗಡಿ ತಾಲೂಕಿನಲ್ಲಿ ನಡೆದಿದೆ. ಆರೋಪಿಯನ್ನು ತಾಲೂಕಿನ ನಿಡ್ಲೆ ನಿವಾಸಿ  ಉಮೇಶ್ ( ೨೫ ) ಎಂದು ಗುರುತಿಸಲಾಗಿದೆ. 
ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಡಿಸೆಂಬರ್ 24ರಂದು ನಿಡ್ಲೆ ಗ್ರಾಮದ ಮಾಪಲಾಜೆ ಎಂಬಲ್ಲಿ ಬಾಲಕಿ ಒಬ್ಬಳೇ ಇದ್ದ ಸಮಯ ಆರೋಪಿಯು ಮನೆಗೆ ಅಕ್ರಮ ಪ್ರವೇಶ ಮಾಡಿ ಬಾಲಕಿ ಮಾನಭಂಗಕ್ಕೆ ಯತ್ನಿಸಿದ್ದು, ಈ ಬಗ್ಗೆ ಬಾಲಕಿಯ ತಾಯಿಯು ದೂರು ನೀಡಿದ್ದಾರೆ. ಪೊಲೀಸರು ಪೋಕ್ಸೋ ಕಾಯ್ದೆ ಅಡಿಯಲ್ಲಿ ಆರೋಪಿ ಉಮೇಶ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ 

No comments