Breaking News

ಕಪ್ಪು ಕುಳಗಳ ಜೊತೆ ಕೈ ಜೋಡಿಸಿದ್ದ ಎಸ್‍ಬಿಎಂ ಸಿಬ್ಬಂದಿ ಆತ್ಮಹತ್ಯೆ


ಬೆಂಗಳೂರು : ಅಕ್ರಮವಾಗಿ ಹಳೆ ನೋಟ್ ಗಳನ್ನು ಬದಲಾಯಿಸಿ ಕಪ್ಪು ಕುಳಗಳ ಜೊತೆ ಕೈ ಜೋಡಿಸಿದ್ದ   ಹಿನ್ನೆಲೆಯಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ಬ್ಯಾಂಕಿನ ಸಿಬ್ಬಂದಿ ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿವೇಕನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕ್ಯಾಶ್ ಮ್ಯಾನೇಜ್ಮೆಂಟ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ರವಿರಾಜ್ ಮೇಲೆ ಬ್ಲಾಕ್ ಅಂಡ್ ವೈಟ್ ದಂಧೆ ಪ್ರಕರಣದಲ್ಲಿ ತೊಡಗಿಸಿಕೊಂಡಿದ್ದ ಆರೋಪ ಕೇಳಿ ಬಂದಿತ್ತು.ಈ ಆರೋಪದ ಹಿನ್ನೆಲೆಯಲ್ಲಿ ಮಂಗಳವಾರ ಸಿಬಿಐ ಅಧಿಕಾರಿಗಳು ರವಿರಾಜ್ ವಿಚಾರಣೆ ನಡೆಸಿದ್ದರು. ರಾತ್ರಿ ಹತ್ತು ಗಂಟೆಯವರೆಗೂ ಸಿಬಿಐ ಅಧಿಕಾರಿಗಳು ಪರಿಶೀಲನೆ ನಡೆಸಿದ್ದರು. ವಿಚಾರಣೆ ವೇಳೆ ರವಿರಾಜ್ ಮೇಲಿದ್ದ ಆರೋಪ ಸಾಬೀತಾಗಿತ್ತು.

ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಸಿಬಿಐ ಬಂಧನ ಮಾಡುತ್ತದೆ. ಅಷ್ಟೇ ಅಲ್ಲದೇ ಕೆಲಸ ಹೋಗುತ್ತದೆ ಎಂದು ವಿಚಲಿತನಾಗಿ ರವಿರಾಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಶಂಕಿಸಲಾಗಿದೆ.

-public tv

No comments