ದಲಿತ ನಾಯಕ ವಿ ಶ್ರೀನಿವಾಸ ಪ್ರಸಾದ್ ಬಿಜೆಪಿಗೆ ಸೇರ್ಪಡೆ
ಬೆಂಗಳೂರು : ಮಾಜಿ ಸಚಿವ ಮತ್ತು ದಲಿತ ನಾಯಕ ವಿ ಶ್ರೀನಿವಾಸ ಪ್ರಸಾದ್ ಬಿಜೆಪಿಗೆ ಸೇರಲು ನಿರ್ಧರಿಸಿದ್ದಾರೆ. ನಂಜನಗೂಡು ಕ್ಷೇತ್ರದ ಉಪ ಚುನಾವಣೆಯಲ್ಲಿ ಅವರು ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ.
ಜ. 2ರಂದು ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿಯಲ್ಲಿ ವರಿಷ್ಠರ ಸಮ್ಮುಖದಲ್ಲಿ ಬಿಜೆಪಿ ಸೇರುವುದಾಗಿ ಶ್ರೀನಿವಾಸ ಪ್ರಸಾದ್ ಶನಿವಾರ ಪ್ರಕಟಿಸಿದರು. ಇದಕ್ಕೂ ಮೊದಲು ಅವರು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರ ಜೊತೆ ಚರ್ಚಿಸಿದರು .ಶ್ರೀನಿವಾಸ್ ಪ್ರಸಾದ್ ಅವರು ಪಕ್ಷಕ್ಕೆ ಸೇರಿದ ನಂತರ ಮೈಸೂರು ಅಥವಾ ನಂಜನಗೂಡಿನಲ್ಲಿ ಬೃಹತ್ ಸಮಾವೇಶ ಹಮ್ಮಿಕೊಳ್ಳುವುದಾಗಿ ಯಡಿಯೂರಪ್ಪ ತಿಳಿಸಿದರು.
No comments