ದೆಹಲಿ : ಕಿಡ್ನಿ ಸಮಸ್ಯೆಯಿಂದ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಕೇಂದ್ರ ಸರ್ಕಾರದ ವಿದೇಶಾಂಗ ಖಾತೆ ಸಚಿವೆ ಸುಷ್ಮಾ ಸ್ವರಾಜ್ ಇದೀಗ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಸೋಮವಾರ ಬಿಡುಗಡೆ ಹೊಂದಿದ್ದಾರೆ ಎಂದು ತಿಳಿದುಬಂದಿದೆ.
ಸುಷ್ಮಾ ಆರೋಗ್ಯ ಕುರಿತಂತೆ ಆಸ್ಪತ್ರೆ ಹೇಳಿಕೆ ಬಿಡುಗಡೆ ಮಾಡಿದ್ದು, ಕಿಡ್ನಿ ಕಸಿ ಚಿಕಿತ್ಸೆ ಒಳಗಾಗಿರೋ ಸುಷ್ಮಸ್ವರಾಜ್ ಇದೀಗ ವೇಗವಾಗಿ ಗುಣಮುಖರಾಗಿದ್ದು ಆಸ್ಪತ್ರೆಯಿಂದ ಬಿಡುಗಡೆಗೊಳ್ಳಲಿದ್ದಾರೆಂದು ಹೇಳಿತ್ತು.
ಸುಷ್ಮಾ ಅವರ ಆರೋಗ್ಯ ಕುರಿತಂತೆ ಆಸ್ಪತ್ರೆ ಹೇಳಿಕೆಯನ್ನು ಬಿಡುಗಡೆ ಮಾಡಿದ್ದು, ಕಿಡ್ನಿ ಕಸಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ ಸುಷ್ಮಾ ಸ್ವರಾಜ್ ಅವರು ವೇಗವಾಗಿ ಗುಣಮುಖರಾಗಿದ್ದು, ಇದೀಗ ಆಸ್ಪತ್ರೆಯಿಂದ ಬಿಡುಗಡೆಗೊಳ್ಳುತ್ತಿದ್ದಾರೆಂದು ಹೇಳಿದೆ. ಕಳೆದ ಹಲವು ವರ್ಷಗಳಿಂದಲೂ ಸಕ್ಕರೆ ಕಾಯಿಲೆಯಿಂದ ಬಳಲುತ್ತಿರುವ ಸುಷ್ಮಾ ಸ್ವರಾಜ್, ನವೆಂಬರ್ 7ರಂದು ಅನಾರೋಗ್ಯದ ನಿಮಿತ್ತ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು.
ಸುಷ್ಮಾ ಸ್ವರಾಜ್ ಪರೀಕ್ಷೆ ನಡೆಸಿದ ವೈದ್ಯರು ಕಿಡ್ನಿ ವೈಫಲ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆಂದು ತಿಳಿಸಿದ್ದರು. ನಂತರ ತುರ್ತು ನಿಗಾ ಘಟಕಕ್ಕೆ ಸುಷ್ಮಾ ಸ್ವರಾಜ್ ಅವರನ್ನು ರವಾನಿಸಲಾಗಿತ್ತು. ಇದಾದ ಕೆಲವೇ ದಿನಗಳಲ್ಲಿ ಕಿಡ್ನಿ ಕಸಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು ಇದೀಗ ಸುಷ್ಮಾ ಸ್ವರಾಜ್ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಹೊಂದಿದ್ದಾರೆ. ಸುಷ್ಮಾ ಕಿಡ್ನಿ ವೈಫಲ್ಯದ ಬಗ್ಗೆ ತಿಳಿದು ಹಲವರು ಕಿಡ್ನಿ ದಾನವಾಗಿ ನೀಡಲು ಮುಂದೆ ಬಂದಿದ್ದನ್ನು ನಾವು ಇಲ್ಲಿ ಸ್ಮರಿಸಬಹುದು.
ಕಿಡ್ನಿ ಕಸಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ ಸುಷ್ಮಾ ಸ್ವರಾಜ್ ಏಮ್ಸ್ ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ.
Reviewed by Suddi 24x7 ವರದಿ
on
8:10 pm
Rating: 5
No comments