ತಮಿಳುನಾಡು ಮುಖ್ಯಮಂತ್ರಿ ಜಯಲಲಿತ ಚಿಕಿತ್ಸೆ ಫಲಕಾರಿಯಾಗದೆ ನಿಧನ.

ಚೆನ್ನೈ : ತಮಿಳುನಾಡು ಮುಖ್ಯಮಂತ್ರಿ ಜಯಲಲಿತ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ರಾತ್ರಿ 11:30 ಕ್ಕೆ ಕೊನೆಯುಸಿರೆಳೆದಿದ್ದಾರೆ, ಈ ಬಗ್ಗೆ ಅಪೋಲೋ ಆಸ್ಪತ್ರೆ ಅಧಿಕೃತ ಮಾಹಿತಿ ಹೊರಡಿಸಿದೆ. ಭಾನುವಾರ ಹೃದಯಾಘಾತಕ್ಕೆ ಒಳಗಾದ ಕಾರಣ ಐಸಿಯುಗೆ ದಾಖಲಿಸಲಾಗಿತ್ತು. ಕಿಡ್ನಿ ವೈಫಲ್ಯದ ಕಾರಣ ಕಳೆದ ಎರಡು ತಿಂಗಳಿನಿಂದ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಇನ್ನೇನು ಗುಣಮುಖರಾದರು ಎನ್ನುವಷ್ಟರಲ್ಲಿ ಭಾನುವಾರ ಮತ್ತೆ ಹೃದಯಾಘಾತಕ್ಕೆ ಒಳಗಾಗಿ ಐಸಿಯೂ'ಗೆ ದಾಖಲಿಸಲಾಗಿತ್ತು. ಸೋಮಾವಾರ ಬೆಳಗ್ಗಿನಿಂದಲೇ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು, ಕೃತಕ ಜೀವರಕ್ಷಕ ಸಾಧನಗಳನ್ನು ಅಳವಡಿಸಲಾಗಿತ್ತು. ಜಯಲಲಿತಾಗೆ 68 ವರ್ಷ ವಯಸ್ಸಾಗಿತ್ತು. ಸಾವಿನ ಸುದ್ದಿ ಕೇಳಿ ಜಯಲಲಿತಾ ಅಭಿಮಾನಿಗಳ ರೋಧನೆ ಮುಗಿಲು ಮುಟ್ಟಿದೆ, ಅಭಿಮಾನಿಗಳು ಅಪೋಲೋ ಆಸ್ಪತ್ರೆಯ ಮೇಲೆ ಕಲ್ಲುತೂರಾಟ ನಡೆಸುತ್ತಿದ್ದಾರೆ. ಆಸ್ಪತ್ರೆ ಸುತ್ತ ಪೋಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
No comments