Breaking News

ಬಾಲ್ಯ ವಿವಾಹದಲ್ಲಿ ರಾಜ್ಯವೇ ನಂ ಒನ್


ಬೆಂಗಳೂರು : ದೇಶದಲ್ಲಿ ನಡೆಯುವ ಬಾಲ್ಯ ವಿವಾಹಗಳ ಪೈಕಿ ಅತೀ ಹೆಚ್ಚು ಅಂದರೆ ಶೇ 23ರಷ್ಟು ಬಾಲ್ಯ ವಿವಾಹ ರಾಜ್ಯದಲ್ಲಿ ನಡೆಯುತ್ತಿದೆ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕು ಆಯೋಗದ ಅಧ್ಯಕ್ಷೆ ಕೃಪಾ ಅಮರ್ ಆಳ್ವ ಆತಂಕ ವ್ಯಕ್ತಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡುತ್ತ ಈ ಮಾಹಿತಿ ನೀಡಿದ ಅವರು, ದೇಶದಲ್ಲಿ ಇತ್ತೀಚಿನ ದಿನಗಳಲ್ಲಿ ಬಾಲ್ಯ ವಿವಾಹಗಳ ಸಂಖ್ಯೆಯಲ್ಲಿ ಕುಸಿತವಾಗುತ್ತಿದ್ದರೂ ಕರ್ನಾಟಕದಲ್ಲಿ ಇನ್ನೂ ದೇಶದ ಶೇ 23.2ರಷ್ಟು ಬಾಲ್ಯ ವಿವಾಹ ನಡೆಯುತ್ತಿದೆ ಎಂದು ಹೇಳಿದ್ದಾರೆ.

ಉತ್ತರ ಕರ್ನಾಟಕದ ಧಾರವಾಡ, ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಹೆಚ್ಚಾಗಿ ಬಾಲ್ಯ ವಿವಾಹ ಚಾಲ್ತಿಯಲ್ಲಿದೆ ಎಂದಿರುವ ಅವರು ಅದರಲ್ಲೂ ಯಾದಗಿರಿಯಲ್ಲಿ ಅತೀ ಹೆಚ್ಚು ಬಾಲ್ಯ ವಿವಾಹ ನಡೆದಿವೆ ಎಂದಿದ್ದಾರೆ.

loading...

No comments