Breaking News

ಬೆಂಗಳೂರಿನ ರಸ್ತೆಗಳ ಸಂಪೂರ್ಣ ಅಭಿವೃದ್ಧಿಗೆ ಬದ್ದ :ಜಾರ್ಜ್ಬೆಂಗಳೂರು, -ಆರು ತಿಂಗಳೊಳಗೆ ನಗರದ ಎಲ್ಲಾ ರಸ್ತೆಗಳು ಪೂರ್ಣವಾಗಿ ಅಭಿವೃದ್ಧಿಗೊಳ್ಳಲಿವೆ ಎಂದು ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಹೇಳಿದರು. ಸುಮಾರು 10 ಕೋಟಿ ರೂ. ವೆಚ್ಚದಲ್ಲಿ ಚರ್ಚ್‍ಸ್ಟ್ರೀಟ್‍ನ 715 ಮೀಟರ್ ರಸ್ತೆಯನ್ನು ಟೆಂಡರ್ ಶ್ಯೂರ್ ಯೋಜನೆಯಡಿ ಸಮಗ್ರವಾಗಿ ಅಭಿವೃದ್ಧಿ ಪಡಿಸುವ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಈ ಹಿಂದೆ ತಾವು, ಮೇಯರ್, ಶಾಸಕ ಎನ್.ಎ.ಹ್ಯಾರಿಸ್ ಇಲ್ಲಿಗೆ ಭೇಟಿ ನೀಡಿ ಈ ರಸ್ತೆ ಪರಿಶೀಲನೆ ನಡೆಸಿದ್ದೆವು. ಟೆಂಡರ್ ಶ್ಯೂರ್ ಯೋಜನೆಯಡಿ ರಸ್ತೆಯನ್ನು 9 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಪಡಿಸುವ ಯೋಜನೆಗೆ ಚಾಲನೆ ನೀಡಲಾಗಿದೆ. ಆದರೆ ನಗರ ಯೋಜನಾ ತಜ್ಞ ಡಾ.ನರೇಶ್ ಅವರು ಈ ರಸ್ತೆಯನ್ನು ವೈಟ್ ಟಾಪಿಂಗ್ ಮಾದರಿಯಲ್ಲಿ ಅಭಿವೃದ್ಧಿ ಪಡಿಸುವಂತೆ ಸಲಹೆ ನೀಡಿದ್ದಾರೆ. ಅವರ ಸಲಹೆಯನ್ನು ಒಪ್ಪಿ ವೈಟ್ ಟಾಪಿಂಗ್ ರಸ್ತೆಯನ್ನಾಗಿ ಮಾಡಲು ನಿರ್ಧರಿಸಲಾಗಿದೆ. ಇದಕ್ಕೆ ಅಂದಾಜು ವೆಚ್ಚಕ್ಕಿಂತ 1 ಕೋಟಿ ರೂ.ಹೆಚ್ಚು ಹಣ ಬೇಕಾಗುತ್ತದೆ ಎಂದು ತಿಳಿಸಿದರು.
ಆರು ತಿಂಗಳ ಕಾಲಾವಧಿಯಲ್ಲಿ ಈ ಯೋಜನೆ ಪೂರ್ಣಗೊಳ್ಳಲಿದೆ. ಈ ರಸ್ತೆ ಮಾತ್ರವಲ್ಲ ನಗರದ ಹಲವು ಕಡೆಗಳಲ್ಲಿ ರಸ್ತೆ ಅಭಿವೃದ್ಧಿಪಡಿಸುವ ಕೆಲಸಗಳು ನಡೆಯುತ್ತಿವೆ. ವಾರ್ಡ್ ರಸ್ತೆಗಳನ್ನು ಅಭಿವೃದ್ಧಿಪಡಿಸುವ ಯೋಜನೆಗಳಿಗೂ ಚಾಲನೆ ನೀಡಲಾಗಿದೆ. ಬೆಂಗಳೂರು ನಗರಕ್ಕೆ ಇದೇ ಮೊದಲ ಬಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅತಿ ಹೆಚ್ಚು ಅನುದಾನ ನೀಡಿದ್ದಾರೆ ಎಂದು ಹೇಳಿದರು.
-ee sanje 


loading...

No comments