ಕಾಶ್ಮೀರದಲ್ಲಿ ಭಾರಿ ಹಿಮಪಾತ11 ಯೋಧರ ಸಾವು
ಕಾಶ್ಮೀರ : ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರಿ ಹಿಮಪಾತ ಸಂಭವಿಸಿದ್ದು, ಒಟ್ಟು 10 ಮಂದಿ ಯೋಧರು ಸಾವನ್ನಪ್ಪಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ.
ನಿನ್ನೆ ಗುರೇಜ್ ಸೆಕ್ಟರ್ ನಲ್ಲಿ ಹಿಮಪಾತವಾಗಿ ಹಲವು ಯೋಧರು ನಾಪತ್ತೆಯಾಗಿದ್ದರು. ಕೂಡಲೇ ರಕ್ಷಣಾ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು. ನಿನ್ನೆ ನಾಪತ್ತೆಯಾಗಿದ್ದವರ ಪೈಕಿ ಹಲವು ಯೋಧರನ್ನು ರಕ್ಷಿಸಲಾಗಿತ್ತು.ಒಟ್ಟು ೧೧ ಯೋಧರ ಮೃತ ದೇಹಗಳು ಇಂದು ಬೆಳಗ್ಗೆ ಪತ್ತೆಯಾಗಿದೆ ಎಂದು ಸೇನಾ ಮೂಲಗಳು ತಿಳಿಸಿವೆ.
ಕಳೆದೊಂದು ವಾರದಿಂದ ಜಮ್ಮು ಮತ್ತು ಕಾಶ್ಮೀರದ ಹವಮಾನದಲ್ಲಿ ಭಾರಿ ಏರುಪೇರಾಗುತ್ತಿದ್ದು, ಭಾರಿ ಪ್ರಮಾಣದ ಹಿಮಪಾತವಾಗುತ್ತಿದೆ. ತಾಪಮಾನ ಕುಸಿತ ಹಾಗೂ ಹಿಮಪಾತಗಳಿಂದಾಗಿ ಗಡಿಯಲ್ಲಿ ಸೈನಿಕರು ಕರ್ತವ್ಯ ನಿರ್ವಹಿಸುವುದೇ ದುಸ್ತರವಾಗಿ ಪರಿಣಮಿಸಿದೆ.
loading...
No comments