ಗ್ರಹ ಸಚಿವ ಪರಮೇಶ್ವರ್ ರಾಜೀನಾಮೆ ನೀಡಲಿ : ಶೋಭಾ ಕರಂದ್ಲಾಜೆ
ಬೆಂಗಳೂರು : ಬೆಂಗಳೂರಿನಲ್ಲಿ ಹೊಸ ವರ್ಷ ಆಚರಣೆ ಸಂದರ್ಭದಲ್ಲಿ ಯುವತಿಯರ ಮೇಲೆ ನಡೆದ ದೌರ್ಜನ್ಯವನ್ನು ಖಂಡಿಸಿ ಬಿಜೆಪಿ ಮಹಿಳಾ ಮೋರ್ಚಾ ಇಂದು ಬೆಂಗಳೂರಿನ ಮೌರ್ಯ ವೃತ್ತದಲ್ಲಿ ಪ್ರತಿಭಟನೆ ನಡೆಸಿತು .
ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಬೆಂಗಳೂರಿನಲ್ಲಿ ನಡೆಯುತ್ತಿರುವ ಮಹಿಳೆ ಲೈಂಗಿಕ ದೌರ್ಜನ್ಯವನ್ನು ಖಂಡಿಸಿದರು ,ಕಾಂಗ್ರೆಸ್ ಸರಕಾರ ಆಡಳಿತಕ್ಕೆ ಬಂದ ಮೇಲೆ ಮಹಿಳೆಯರ ಮೇಲೆ ದೌರ್ಜನ್ಯ ಹೆಚ್ಚಾಗುತ್ತಿದೆ ,ನಿಷ್ಠಾವಂತ ಅಧಿಕಾರಿಗಳ ವರ್ಗಾವಣೆಯಿಂದ ಕಾನೂನು ಸುವ್ಯವಸ್ಥೆ ಹದಗೆಡುತ್ತಿದೆ .ಮತ್ತು ಪ್ರತಿಭಟನೆಯಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿತ್ತಿ ಪತ್ರ ಪ್ರದರ್ಶಿಸಿ ಆಕ್ರೋಶ ವ್ಯಕ್ತ ಪಡಿಸಿದರು
No comments