ರಾಯಣ್ಣ ಬ್ರಿಗೇಡ್ ಮತ್ತು ಬಿಜೆಪಿಗೆ ಯಾವುದೇ ಸಂಬಂಧವಿಲ್ಲ ಯಡಿಯೂರಪ್ಪ
ಬೆಂಗಳೂರು : ರಾಯಣ್ಣ ಬ್ರಿಗೇಡ್ ಮತ್ತು ಬಿಜೆಪಿಗೆ ಯಾವುದೇ ಸಂಬಂಧ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಬೆಂಗಳೂರಿನಲ್ಲಿ ಖಡಕ್ ಆಗಿ ನುಡಿದ್ದಿದ್ದಾರೆ. ಪಕ್ಷದ ನಾಯಕರು ಮತ್ತು ಕಾರ್ಯಕರ್ತರು ಬ್ರಿಗೇಡ್ ಸಮಾವೇಶದಲ್ಲಿ ಭಾಗಿಯಾಗುವಂತಿಲ್ಲ ಎಂದು ಹೇಳಿ ಈಶ್ವರಪ್ಪನವರಿಗೆ ಪರೋಕ್ಷವಾಗಿ ಎಚ್ಚರಿಕೆ ನೀಡಿದ್ದಾರೆ .ರಾಯಣ್ಣ ಬ್ರಿಗೇಡ್ ಚಟಿವಟಿಕೆ ಬಗ್ಗೆ ರಾಷ್ಟ್ರೀಯ ನಾಯಕರು ಗಮನಿಸುತ್ತಿದ್ದಾರೆ ಶೀಘ್ರವೇ ಸೂಕ್ತ ಕ್ರಮವನ್ನು ಕೈಗೊಳ್ಳುವ ಭರವಸೆ ಕೂಡ ಇದೆ ಎಂದು ಯಡಿಯೂರಪ್ಪ ಹೇಳಿದರು . ಈ ಎಲ್ಲಾ ಬೆಳವಣಿಗೆಯಿಂದ ರಾಜ್ಯ ಬಿಜೆಪಿಯಲ್ಲಿ ಯಡಿಯೂರಪ್ಪ ಮತ್ತು ಈಶ್ವರಪ್ಪ ಕದನ ತಾರಕ್ಕೇರಿದೆ
No comments