Breaking News

ದಕ್ಷಿಣ ಕನ್ನಡಕ್ಕೆ ಬೆಂಕಿ ಇಡುತೇನೆ ಎಂದ ನಳೀನ್ ವಿರುದ್ಧ ದೂರು ದಾಖಲಿಸಿದ ಕಾಂಗ್ರೆಸ್


ಮಂಗಳೂರು : ಕಾರ್ತಿಕ್ ರಾಜ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ದಕ್ಷಿಣ ಕನ್ನಡಕ್ಕೆ ಬೆಂಕಿ ಹಚ್ಚುತೇನೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ ಸಂಸದರ ವಿರುದ್ಧ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಕೊಣಾಜೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ .

ನಳಿನ್ ಕುಮಾರ್ ಕಟೀಲ್ ಅವರು ಎರಡು ತಿಂಗಳ ಹಿಂದೆ ನಡೆದ ಬಿಜೆಪಿ ಕಾರ್ಯಕರ್ತ ಕಾರ್ತಿಕ್ ರಾಜ್ ಕೊಲೆ ಪ್ರಕರಣದ ಆರೋಪಿಗಳನ್ನು ಬಂಧಿಸದಿದ್ದಲ್ಲಿ ಇಡೀ ದಕ್ಷಿಣ ಕನ್ನಡ ಜಿಲ್ಲೆಗೆ ಬೆಂಕಿ ಹಚ್ಚುವುದಾಗಿ ಎಚ್ಚರಿಕೆ ನೀಡಿದ ಹೇಳಿಕೆಗೆ ವ್ಯಾಪಕ ಟೀಕೆ ವ್ಯಕ್ತವಾಗಿತ್ತು .ಜನಪ್ರತಿನಿಧಿಯಾಗಿ ಬೇಜವಾಬ್ದಾರಿಯಾಗಿ ಹೇಳಿಕೆ ನೀಡಿದ ಸಂಸದರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ರಮಾನಾಥ್ ರೈ ಹೇಳಿಕೆ ನೀಡಿದ್ದರು ,ಇದೀಗ ಮಂಗಳೂರು ಸಂಸದರ ಹೇಳಿಕೆ ಕುರಿತಂತೆ  ಉಳ್ಳಾಲ ಬ್ಲಾಕ್ ಕಾಂಗ್ರೆಸ್  ನೇತೃತ್ವದಲ್ಲಿ ದೂರು ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ .

No comments