Breaking News

ಕಾಗೆ ಸಹಚರರು ಮಹಾರಾಷ್ಟ್ರದಲ್ಲಿ ಅರೆಸ್ಟ್



ಬೆಳಗಾವಿ :ಕಾಂಗ್ರೆಸ್ ಕಾರ್ಯಕರ್ತ ವಿವೇಕ್ ಶೆಟ್ಟಿ ಮನೆಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ್ದ ಕಾಗವಾಡ ಬಿಜೆಪಿ ಶಾಸಕ ರಾಜು ಕಾಗೆ ಬೆಂಬಲಿಗರನ್ನು ಪೊಲೀಸರು ಬಂಧಿಸಿದ್ದಾರೆ. ಪೂನಾದಿಂದ 120 ಕಿಲೋ ಮೀಟರ್ ದೂರದಲ್ಲಿರುವ ಜಂಗಲ್ಗಾ ರೆಸಾರ್ಟ್ನಲ್ಲಿ ತಲೆಮರೆಸಿಕೊಂಡಿದ್ದ ಶಾಸಕ ರಾಜು ಕಾಗೆ ಹಾಗೂ ಇವರ ಪುತ್ರಿ, ಸೋದರ ಸೇರಿದಂತೆ ಆರು ಮಂದಿಯನ್ನು ಬಂಧಿಸಿರುವುದಾಗಿ ಎಸ್ಪಿ ರವಿಕಾಂತೇಗೌಡ ತಿಳಿಸಿದ್ದಾರೆ.
ಪ್ರಕರಣ ಹಿನ್ನಲೆ
ಫೇಸ್ ಬುಕ್ ನಲ್ಲಿ ಅವಹೇಳನಕಾರಿ ಕಮೆಂಟ್ ಮಾಡಿದ್ದಾರೆಂಬ ಆರೋಪದ ಮೇರೆಗೆ ಜ.1 ರಂದು ವಿವೇಕ ಶೆಟ್ಟಿ ಮೇಲೆ ಶಾಸಕ ರಾಜು ಕಾಗೆ ಕುಟುಂಬ ಮತ್ತು ಬೆಂಬಲಿಗರು ಮಾರಣಾಂತಿಕ ಹಲ್ಲೆ ನಡೆಸಿದ್ದರು  ಮತ್ತು  ಜ. 09 ರಂದು ಪ್ರಕರಣ ದಾಖಲಾಗಿತ್ತು. ಹಲ್ಲೆಗೆ ಸಂಬಂಧಿಸಿದಂತೆ ಪೊಲೀಸರಿಗೆ ಸಿಸಿಟಿವಿ ದೃಶ್ಯಾವಳಿಗಳು ದೊರೆತಿದ್ದವು.
loading...

No comments