ಬೆಂಗಳೂರು : ನ್ಯಾಯಮೂರ್ತಿ ಭಾಸ್ಕರ್ ರಾವ್ ತೆರವಿನಿಂದ ಹಲವು ತಿಂಗಳುಗಳಿಂದ ಖಾಲಿ ಇರುವ ಲೋಕಾಯುಕ್ತ ಹುದ್ದೆಗೆ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ವಿಶ್ವನಾಥ ಶೆಟ್ಟಿ, ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಗೋಪಾಲಗೌಡ, ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎನ್. ಕುಮಾರ್ ಈ ಮೂರೂ ಜನ ನ್ಯಾಯ ಮೂರ್ತಿಗಳ ಹೆಸರನ್ನು ಪ್ರಸ್ತಾಪಿಸಲಾಗಿತ್ತು.ಇದರಲ್ಲಿ ಸಿ.ವಿಶ್ವನಾಥ್ ಶೆಟ್ಟಿ ಅವರನ್ನು ನೇಮಿಸಲು ಉನ್ನತಾಧಿಕಾರ ಸಮಿತಿ ತೀರ್ಮಾನಿಸಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸರ್ವಪಕ್ಷ ಸಭೆಯಲ್ಲಿ ಈ ತೀರ್ಮಾನವನ್ನು ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ
No comments