ತಮಿಳುನಾಡಿನ ಸಂಸ್ಕ್ರತಿ ಮತ್ತು ಪರಂಪರೆ ರಕ್ಷಣೆಗೆ ಬದ್ಧ : ಮೋದಿ
ನವದೆಹಲಿ : ಸಾಂಸ್ಕೃತಿಕ ಕ್ರೀಡೆ ಜಲ್ಲಿಕಟ್ಟಿಗಾಗಿ ತಮಿಳುನಾಡಿನಲ್ಲಿ ಹೋರಾಟ ತೀವ್ರಗೊಂಡ ಹಿನ್ನಲೆಯಲ್ಲಿ ಜಲ್ಲಿಕಟ್ಟು ಕ್ರೀಡೆಗೆ ಅವಕಾಶ ನೀಡುವ ಸುಗ್ರೀವಾಜ್ಞೆಗೆ ಕೇಂದ್ರ ಸರ್ಕಾರ ಒಪ್ಪಿಕೊಂಡಿದೆ ಮತ್ತು ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ತಮಿಳರ ಆಶೋತ್ತರಗಳನ್ನು ಈಡೇರಿಸಲು ಅಗತ್ಯವಾದ ಎಲ್ಲ ಕ್ರಮಗಳನ್ನು ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ತಮಿಳುನಾಡಿನ ಶ್ರೀಮಂತ ಸಂಸ್ಕೃತಿ ಬಗ್ಗೆ ನಮಗೆ ತುಂಬಾ ಹೆಮ್ಮೆ ಇದೆ. ತಮಿಳು ಜನರ ಭಾವನೆಗಳನ್ನು ನಾವು ಗೌರವಿಸುತ್ತೇವೆ. ಹಾಗೆಯೇ ರಾಜ್ಯದ ಪ್ರಗತಿಗಾಗಿ ಕೇಂದ್ರ ಸರ್ಕಾರ ಸಂಪೂರ್ಣ ಬದ್ಧವಾಗಿದೆ. ತಮಿಳರ ಹಿತಾಸಕ್ತಿಗಳನ್ನು ರಕ್ಷಿಸಲು ಸಾಧ್ಯವಾಗುವ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ
loading...
No comments