ರಾಜ್ಯದಲ್ಲಿ ರಚನೆಯಾಗಲಿದೆ ಹೊಸ 33 ತಾಲೂಕುಗಳು
ಬೆಂಗಳೂರು : ರಾಜ್ಯದಲ್ಲಿ ಹೊಸದಾಗಿ 33 ತಾಲ್ಲೂಕುಗಳನ್ನು ರಚನೆ ಮಾಡುವುದಾಗಿ ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ತಿಳಿಸಿದ್ದಾರೆ .ಈ ಬಗ್ಗೆ ಮುಂದಿನ ಬಜೆಟ್‍ನಲ್ಲಿ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು . ಪ್ರತಿ ತಾಲೂಕಿಗೆ ಮೂಲಸೌಕರ್ಯ ಕಲ್ಪಿಸಲು 100 ಕೋಟಿ ರೂ. ವೆಚ್ಚವಾಗುತ್ತದೆ. ಸುಮಾರು 3300 ಕೋಟಿ ರೂ. ಸರ್ಕಾರದ ಮೇಲೆ ಹೊರಬೀಳಲಿದೆ. ಮೊದಲು ಮೂಲಸೌಕರ್ಯ ಕಲ್ಪಿಸಿದ ನಂತರ ಹೊಸ ತಾಲ್ಲೂಕುಗಳನ್ನು ಘೋಷಣೆ ಮಾಡಲು ಉದ್ದೇಶಿಸಲಾಗಿದೆ ಎಂದರು.
ಕುಡಿಯುವ ನೀರಿಗೆ 350 ಕೋಟಿ ಹಣ ಬಿಡುಗೆಡ ಮಾಡಿದ್ದು ಎಷ್ಟೇ ಹಣ ಖರ್ಚಾದರೂ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
No comments