ಯಾರು ಎಷ್ಟೇ ಅಪಸ್ವರ ತೆಗೆದರೂ ಬ್ರಿಗೇಡ್ ಸಮಾವೇಶ ನಿಲ್ಲಲ್ಲ : ಈಶ್ವರಪ್ಪ
ಬಾಗಲಕೋಟೆ,: ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಚಟುವಟಿಕೆಯಿಂದ ಯಾವುದೇ ಕಾರಣಕ್ಕೂ ಹಿಂದೆ ಸರಿಯುವುದಿಲ್ಲ ಎಂದು ಹೇಳಿ ಬಿ.ಎಸ್.ಯಡಿಯೂರಪ್ಪ ನವರಿಗೆ ನೇರವಾದ ಟಾಂಗ್ ನೀಡಿದ್ದಾರೆ .
ನಾಳೆ ನಡೆಯಲಿರುವ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಸಮಾವೇಶಕ್ಕೆ ನಾನು ಯಾರನ್ನೂ ವೈಯಕ್ತಿಕವಾಗಿ ಆಹ್ವಾನಿಸಿಲ್ಲ. ಹಿಂದುಳಿದವರು, ದಲಿತರು ಜಾಗೃತರಾಗುತ್ತಿರುವ ಕಾರ್ಯಕ್ರಮಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಏಕೆ ವಿರೋಧಿಸುತ್ತಾರೆಂದು ಮುಖಂಡ ಕೆ.ಎಸ್.ಈಶ್ವರಪ್ಪ ಪ್ರಶ್ನಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ,
ಕಾಂಗ್ರೆಸ್‍ನಲ್ಲಿ ಸೂಕ್ತ ನ್ಯಾಯ ಸಿಕ್ಕಿಲ್ಲವೆಂದು ದಲಿತರು ಮತ್ತು ಹಿಂದುಳಿದವರು ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಸಂಘಟನೆಯಲ್ಲಿ ಗುರುತಿಸಿಕೊಳ್ಳುತ್ತಿದ್ದಾರೆ. ಇವರನ್ನು ಜಾಗೃತಿಗೊಳಿಸುವುದು ನಮ್ಮ ಉದ್ದೇಶ. ಯಡಿಯೂರಪ್ಪ ವಿನಾಕಾರಣ ಅಪಸ್ವರ ತೆಗೆಯುತ್ತಿರುವುದು ಸರಿಯಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು. ನಾಳೆ ನಡೆಯಲಿರುವ ರಾಯಣ್ಣ ಬ್ರಿಗೇಡ್ ಸಮಾವೇಶಕ್ಕೆ ನಾನು ಹೋಗುತ್ತೇನೆ. ಬಸವಣ್ಣನ ನಾಡು ಕೂಡಲ ಸಂಗಮದಲ್ಲಿ ನಡೆಯಲಿರುವ ಈ ಕಾರ್ಯಕ್ರಮ ಇತಿಹಾಸ ಪುಟದಲ್ಲಿ ಶಾಶ್ವತವಾಗಿ ಉಳಿಯಲಿದೆ ಎಂದು ಹೇಳಿದರು.
loading...
No comments