Breaking News

ಪ್ರವಾಸಿ ಭಾರತೀಯ ದಿವಸ್" ಬೆಂಗಳೂರಿಗೆ ಪ್ರಧಾನಿ ಮೋದಿ


ಬೆಂಗಳೂರು : ಬೆಂಗಳೂರಲ್ಲಿ 3 ದಿನಗಳ ಕಾಲ ನಡೆಯುವ ‘ಪ್ರವಾಸಿ ಭಾರತೀಯ ದಿವಸ್’ಗೆ ಇಂದು ಚಾಲನೆ ನೀಡಲಾಯಿತು ದೇಶದ ಅಭಿವೃದ್ಧಿಗೆ ಅನಿವಾಸಿ ಭಾರತೀಯರು ಕೈಜೋಡಿಸುವಂತೆ ಮಾಡುವ ನಿಟ್ಟಿನಲ್ಲಿ ಕೈಗೊಳ್ಳಲಾಗ್ತಿರುವ ಕಾರ್ಯಕ್ರಮದಲ್ಲಿ ಜಗತ್ತಿನ ಮೂಲೆ ಮೂಲೆಗಳಿಂದ ಸಾವಿರಾರು ಮಂದಿ ಪ್ರತಿನಿಧಿಗಳು ಇದರಲ್ಲಿ ಭಾಗಿಯಾಗ್ತಿದ್ದಾರೆ. ಇಂದು ರಾತ್ರಿ 11.10ಕ್ಕೆ ಪ್ರಧಾನಿ ಮೋದಿ ಬೆಂಗಳೂರಿಗೆ ಆಗಮಿಸುತ್ತಿದ್ದು, ಲೀಲಾ ಪ್ಯಾಲೇಸ್‍ನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಭಾನುವಾರ ಬೆಳಗ್ಗೆ 10ಕ್ಕೆ ಪ್ರವಾಸಿ ದಿವಸ್‍ಗೆ ವಿದ್ಯುಕ್ತ ಚಾಲನೆ ನೀಡಲಿದ್ದಾರೆ. ಸೋಮವಾರ ಸಂಜೆ 5 ಗಂಟೆಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಪ್ರವಾಸಿ ಭಾರತೀಯ ಸಮ್ಮಾನ್ ಪ್ರಶಸ್ತಿ ಪ್ರದಾನ ಮಾಡಿ, ಸಮಾರೋಪ ಭಾಷಣ ಮಾಡಲಿದ್ದಾರೆ.

No comments