Breaking News

ಮದ್ಯದಂಗಡಿಗಳಿಗೆ ಅನುಮತಿ ನೀಡುವ ರಾಜ್ಯದ ಸರಕಾರದ ವಿರುದ್ಧ ಕಿಡಿ ಕಾರಿದ ಸುನಿಲ್



ಕಾರ್ಕಳ : ರಾಜ್ಯದಲ್ಲಿ ಹೊಸ ಮದ್ಯದಂಗಡಿಗಳಿಗೆ ಪರವಾನಗಿ ನೀಡುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಚಿಂತನೆ ನಡೆಸಿದ ಹಿನ್ನಲೆಯಲ್ಲಿ ವಿಧಾನ ಸಭಾ ಮುಖ್ಯ ಸಚೇತಕ ಸುನಿಲ್ ಕುಮಾರ್  ನೇತೃತ್ವದಲ್ಲಿ ಹೊಸ ಮದ್ಯದಂಗಡಿಗಳಿಗೆ ಅನುಮತಿ ನೀಡುವ ರಾಜ್ಯದ ಕಾಂಗ್ರೆಸ್ ಸರಕಾರದ ವಿರುದ್ಧ ಮುದ್ರಾಡಿ ಮತ್ತು ಸಾಣೂರಿನಲ್ಲಿ ಪ್ರತಿಭಟನೆ ನಡೆಯಿತು ,ಪ್ರತಿಭಟನೆಯಲ್ಲಿ ಮಾತನಾಡಿದ ಸುನಿಲ್ ಕುಮಾರ್ 94 ಸಿ, 94 ಸಿಸಿ ಮತ್ತು ಡೀಮ್ಡ್ ಫಾರೆಸ್ಟ್ ಸಮಸ್ಯೆಗಳು ಹಾಗೂ ತಾಲೂಕಿನಲ್ಲಿ ಹೊಸ ಮದ್ಯದಂಗಡಿಗಳಿಗೆ ಪ್ರಾರಂಭಕ್ಕೆ ವಿರೋಧ ಬಗ್ಗೆ  ಜನರಿಗೆ ತಿಳಿ ಹೇಳಿ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು .

No comments