ಇಸ್ಲಾಂ ಉಗ್ರರ ವಿರುದ್ಧ ರಣಕಹಳೆ ಊದಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್
ಅಮೇರಿಕಾ - ಹೊಸದಾಗಿ ಆಯ್ಕೆಯಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇಸ್ಲಾಂ ಉಗ್ರರ ವಿರುದ್ಧ ರಣಕಹಳೆ ಮೊಳಗಿಸಿದ್ದಾರೆ ಮತ್ತು ಈ ನಿಟ್ಟಿನಲ್ಲಿ ಅಮೇರಿಕಾ ದೇಶದಿಂದ ಇಸ್ಲಾಂ ಮೂಲಭೂತವಾದಿ ಭಯೋತ್ಪಾದಕರನ್ನು ದೂರವಿಡುವ ಹಾಗೂ ನಿರಾತ್ರಿತರ ವಲಸೆಯನ್ನು ನಿಯಂತ್ರಿಸಲು ನೆರವಾಗುವ ಆದೇಶಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇಂದು ಸಹಿ ಮಾಡಿದ್ದಾರೆ. ವಿಶ್ವಕ್ಕೆ ಕಂಟಕಪ್ರಾಯವಾಗಿರುವ ಇಸ್ಲಾಮಿಕ್ ಸ್ಟೇಟ್ (ಐಎಸ್) ಉಗ್ರಗಾಮಿಗಳೂ ಸೇರಿದಂತೆ ಏಳು ಮುಸ್ಲಿಂ ರಾಷ್ಟ್ರಗಳ ಭಯೋತ್ಪಾದಕರ ನಿಗ್ರಹಕ್ಕೆ ಟ್ರಂಪ್ ದಿಟ್ಟ ಹೆಜ್ಜೆ ಇಟ್ಟಿದ್ದಾರೆ.
ಇಸ್ಲಾಂ ಪ್ರಧಾನ ರಾಷ್ಟ್ರಗಳಾದ ಇರಾನ್, ಇರಾಕ್, ಲಿಬಿಯಾ, ಸೋಮಾಲಿಯಾ, ಸೂಡಾನ್, ಸಿರಿಯಾ ಮತ್ತು ಯೆಮೆನ್ ಈ ದೇಶಗಳ ಉಗ್ರರನ್ನು ಅಮೆರಿಕದಿಂದ ಹೊರಗಿಡುವ ಆದೇಶಕ್ಕೆ ಸಹಿ ಹಾಕುವ ಮೂಲಕ ಟ್ರಂಪ್ ಇಸ್ಲಾಂ ದೇಶಗಳ ಭಯೋತ್ಪಾದಕರು ಮತ್ತು ಭಯೋತ್ಪಾದನೆ ಚಟುವಟಿಕೆಗೆ ಭಾರೀ ಪೆಟ್ಟು ನೀಡಿದ್ದಾರೆ ಎಂದು ಅಮೆರಿಕದ ಮಿತ್ರರಾಷ್ಟ್ರಗಳು ಬಣ್ಣಿಸಿವೆ.
ಅಮೆರಿಕ ಅಧ್ಯಕ್ಷರಾದ ನಂತರ ರಕ್ಷಣಾ ಇಲಾಖೆ-ಪೆಂಟಗನ್‍ಗೆ ಪ್ರಥಮ ಬಾರಿಗೆ ಭೇಟಿ ನೀಡಿ ಈ ಆದೇಶಕ್ಕೆ ಟ್ರಂಪ್ ಸಹಿ ಮಾಡಿದ್ದಾರೆ.. ಅಮೆರಿಕ ಸಂಯುಕ್ತ ಸಂಸ್ಥಾನದಿಂದ ಇಸ್ಲಾಂ ಮೂಲಭೂತವಾದಿ ಭಯೋತ್ಪಾದಕರನ್ನು ಹೊರಗಿಡುವ ಹೊಸ ಕಠಿಣ ಕ್ರಮಗಳಿಗೆ ನಾನು ಚಾಲನೆ ನೀಡುತ್ತಿದ್ದೇನೆ. ಉಗ್ರರು ಇಲ್ಲಿರುವುದು ನಮಗೆ ಬೇಕಿಲ್ಲ ಎಂದು ತಿಳಿಸಿದ್ದಾರೆ.
loading...
No comments