Breaking News

ಕಪ್ಪತ್ತಗುಡ್ಡ ರಕ್ಷಣೆಗೆ ಫೆ.13 ರಿಂದ 15 ಅಹೋರಾತ್ರಿ ಧರಣಿ


ಬೆಂಗಳೂರು: ಕಪ್ಪತ್ತಗುಡ್ಡದಲ್ಲಿ ಗಣಿಗಾರಿಕೆಗೆ ಅವಕಾಶ ನೀಡಲು ಮುಂದಾಗಿರುವ ಸರ್ಕಾರದ ಕ್ರಮವನ್ನು ಖಂಡಿಸಿ ಫೆಬ್ರವರಿ 13 ರಿಂದ 15 ರವರೆಗೆ ಜನಸಂಗ್ರಾಮ ಪರಿಷತ್ತು ಹಾಗೂ ಸ್ಥಳೀಯ ಸಂಘಟನೆಗಳ ನೇತೃತ್ವದಲ್ಲಿ ಅಹೋರಾತ್ರಿ ಧರಣಿ ನಡೆಸಲು ತೀರ್ಮಾನಿಸಲಾಗಿದೆ.

ನಗರದ ಎಂ.ಜಿ. ರಸ್ತೆಯಲ್ಲಿನ ನಮ್ಮ ಮೆಟ್ರೋ ರಂಗೋಲಿ ಕೇಂದ್ರದಲ್ಲಿ ಭಾನುವಾರ ಜಗದ್ಗುರು ತೋಂಟದಾರ್ಯ ಮಹಾಸಂಸ್ಥಾನ ಮಠದ ಸಹಯೋಗದಲ್ಲಿ ಏರ್ಪಡಿಸಿದ್ದ "ಗಣಿಗಾರಿಕೆಗೆ ಬಲಿಯಾಯ್ತಾ ಕಪ್ಪತ್ತಗುಡ್ಡ' ಕುರಿತು ಸುಧೀರ್‌ ಶೆಟ್ಟಿ ಅವರ ಛಾಯಾಚಿತ್ರ ಪ್ರದರ್ಶನದಲ್ಲಿ ಪಾಲ್ಗೊಂಡು ಮಾತನಾಡಿದ ಸಾಮಾಜಿಕ ಕಾರ್ಯಕರ್ತ ಎಸ್‌.ಆರ್‌. ಹಿರೇಮಠ, ಜೀವವೈವಿಧ್ಯತೆಯಿಂದ ಕೂಡಿದ ಕಪ್ಪತ್ತಗುಡ್ಡದಲ್ಲಿ ಯಾವುದೇ ಕಾರಣಕ್ಕೂ ಗಣಿಗಾರಿಕೆಗೆ ಅವಕಾಶ ನೀಡಬಾರದು ಎಂದು ಆಗ್ರಹಿಸಿದರು.


loading...

No comments