Breaking News

ಕೊಲೆ ದರೋಡೆಗೆ ಸಂಚು ರೂಪಿಸಿದ್ದ 7 ಮಂದಿ ಸೆರೆ


ಮಂಗಳೂರು: ನಗರದ ಪಣಂಬೂರು ಠಾಣಾ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬರ ಕೊಲೆಗೆ ಹಾಗೂ ಶ್ರೀಮಂತ ವ್ಯಕ್ತಿಗಳ ದರೋಡೆಗಾಗಿ ಸಂಚು ರೂಪಿಸುತ್ತಿದ್ದ ಕುಖ್ಯಾತ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 2 ಪಿಸ್ತೂಲ್, ಸಜೀವ ಗುಂಡುಗಳು, ಚೂರಿ ಹಾಗೂ ಕೃತ್ಯಕ್ಕೆ ಉಪಯೋಗಿಸಿದ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ



ಮಂಗಳೂರು ನಗರದ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ತಣ್ಣೀರುಬಾವಿ ಬೀಚ್ ರಸ್ತೆಯಲ್ಲಿ ಮಾರುತಿ ಸ್ವಿಫ್ಟ್ ಕಾರು ಹಾಗೂ ರಿಕ್ಷಾವೊಂದರಲ್ಲಿ ಈ ಹಿಂದೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ಜೈಲಿನಿಂದ ಇತ್ತೀಚೆಗೆ ಬಿಡುಗಡೆಗೊಂಡಿದ್ದವರು ವ್ಯಕ್ತಿಯೊಬ್ಬರ ಕೊಲೆಗೆ ಸಂಚು ರೂಪಿಸುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಸುರತ್ಕಲ್‍ನ ಸಫ್ವಾನ್, ಹುಸೈನ್, ಮೊಹಮ್ಮದ್ ಫೈಸಲ್, ಎಮ್ಮೆಕೆರೆಯ ಅಬ್ದುಲ್ ನಾಸಿರ್, ಮುಕ್ಕ ಸುರತ್ಕಲ್‍ನ ಸಂಶುದ್ದೀನ್, ಉಳ್ಳಾಲದ ಹಳೆಕೋಟೆಯ ಉಮ್ಮರ್ ಫಾರೂಕ್ ಹಾಗೂ ಮೊಹಮ್ಮದ್ ಅನ್ಸಾರ್ ಎಂಬುವವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತರಿಂದ 2 ಪಿಸ್ತೂಲ್‍ಗಳು, 7 ಸಜೀವ ಮದ್ದುಗುಂಡುಗಳು, 2 ಚೂರಿಗಳು, 3 ಮೊಬೈಲ್ ಫೋನ್  ಕೆಎ-19-ಎಂಇ-4009 ಮಾರುತಿ ಸ್ವಿಫ್ಟ್ ಕಾರು, ಕೆಎ-19-ಎಬಿ-6123 ಬಜಾಜ್ ಆಟೋ ರಿಕ್ಷಾವನ್ನು ವಶಪಡಿಸಿಕೊಳ್ಳಲಾಗಿದೆ., ಆರೋಪಿಗಳನ್ನು ಹಾಗೂ ವಶಪಡಿಸಿಕೊಂಡ ವಸ್ತುಗಳನ್ನು ಪಣಂಬೂರು ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.



loading...

No comments