Breaking News

ಎತ್ತಿನ ಹೊಳೆ ಉಪವಾಸ 3ಗಂಟೆಯಲ್ಲಿ ಅಂತ್ಯ



ಮಂಗಳೂರು :ಎತ್ತಿನಹೊಳೆ ಯೋಜನೆ ವಿರುದ್ಧ ನೇತ್ರಾವತಿ ಸಂರಕ್ಷಣಾ ಸಮಿತಿಯಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಗೊಂಡು 3ಗಂಟೆಯಲ್ಲಿ ಅಂತ್ಯ ಕಾಣಿತು . ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ನಡೆಯುತ್ತಿರುವ ಸತ್ಯಾಗ್ರಹದಲ್ಲಿ ಸಂಸದ ನಳಿನ್ ಕುಮಾರ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು



ಉಪವಾಸ ಆರಂಭಕ್ಕೂ ಮುನ್ನ ಗಾಂಧಿ ಪ್ರತಿಮೆ ಬಳಿಯಿಂದ ಬೃಹತ್ ಮೆರವಣಿಗೆ ನಡೆಯಿತು. ಹೋರಾಟಗಾರರು, ಸ್ವಾಮೀಜಿಗಳು, ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಹೋರಾಟಗಾರರ ಬಂಧನ: ಎತ್ತಿನಹೊಳೆ ಯೋಜನೆ ವಿರೋಧಿ ಪ್ರತಿಭಟನೆ ನಡೆಸಿದ್ದಕ್ಕೆ ಸಂಸದ ನಳಿನ್ ಕುಮಾರ್ ಸೇರಿದಂತೆ 50 ಮಂದಿಯನ್ನು ಬಲವಂತವಾಗಿ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ 
loading...

No comments