Breaking News

ಎಐಎಡಿಎಂಕೆ ಮುಖಂಡನ ಕೊಚ್ಚಿ ಕೊಲೆಗೈದ ದುಷ್ಕರ್ಮಿಗಳುತಮಿಳುನಾಡು : ತಮಿಳುನಾಡಿನ ತಿರುವಣ್ಣಾಮಲೈನಲ್ಲಿ ಎಐಎಡಿಎಂಕೆ ಪಕ್ಷದ ಮುಖಂಡನೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ತಿರುವಣ್ಣಾಮಲೈ ಎಐಎಡಿಎಂಕೆ ಪಕ್ಷದ ಮುಖಂಡನಾಗಿದ್ದ ಕನಕರಾಜ್ ಎಂಬವರೇ ದುಷ್ಕರ್ಮಿಗಳ ಕೈಯಿಂದ ಹತ್ಯೆಗೀಡಾದವರು.

ಆದಿತ್ಯವಾರ (ಇಂದು) ಬೆಳಗ್ಗೆ ವಾಯುವಿಹಾರಕ್ಕೆಂದು ತೆರಳುತ್ತಿದ್ದಾಗ ತಿರುವಣ್ಣಾಮಲೈನ ಅರುಣಾಚಲೇಶ್ವರ ದೇವಾಲಯದ ಬಳಿ ಏಕಾಏಕಿ ದಾಳಿ ನಡೆಸಿದ ದುಷ್ಕರ್ಮಿಗಳು ಕೊಚ್ಚಿ ಕೊಲೆ ಮಾಡಿದ್ದಾರೆ. ಹತ್ಯೆ ಸಂಬಂಧ ಮೂವರು ಆರೋಪಿಗಳನ್ನು ಪೋಲೀಸರು ವಶಕ್ಕೆ ಪಡೆದು ಕೊಂಡಿದ್ದಾರೆ. ಹಳೆಯ ವೈಷಮ್ಯವೇ ಹತ್ಯೆಗೆ ಕಾರಣವೆಂದು ತಿಳಿದುಬಂದಿದೆ. ಹತ್ಯೆಗೆ ಬಳಸಿದ ಕಾರು ಮತ್ತು ದ್ವಿಚಕ್ರ ವಾಹನ ಪೊಲೀಸರು ಆರೋಪಿಗಳಿಂದ ವಶಪಡಿಸಿಕೊಂಡಿದ್ದಾರೆ.


loading...

No comments