Breaking News

ಹಾಸನದಲ್ಲಿ ಹುತಾತ್ಮ ಯೋಧ ಸಂದೀಪ್ ಪಾರ್ಥಿವ ಶರೀರ

ಹಾಸನ: ವೀರ ಯೋಧ ಸಂದೀಪ್ ಪಾರ್ಥಿವ ಶರೀರ ತವರಿಗೆ ಆಗಮಿಸಿದೆ. ಯೋಧನ ಸಾವಿಗೆ ಜನ ಕಂಬನಿ ಮಿಡಿದಿದ್ದಾರೆ. ದೇಶಕ್ಕಾಗಿ ಪ್ರಾಣತೆತ್ತಿದ್ದಕ್ಕೆ  ನಮನ ಸಲ್ಲಿಸಿದರು. ಇಂದು ಹುಟ್ಟೂರು ದೇವಿರಹಳ್ಳೀಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನೆರವೇರಲಿದೆ.
ಯೋಧ ಸಂದೀಪ್ ಮನೆಯಲ್ಲಿ ಶೋಕ ಸಾಗರ
ಜಮ್ಮುವಿನಲ್ಲಿ ಜನವರಿ 25ರಂದು ನಡೆದ ಹಿಮಪಾತ ದುರಂತದಲ್ಲಿ ಹುತಾತ್ಮರಾಗಿದ್ದ  ಹುತಾತ್ಮ ಯೋಧ ಸಂದೀಪ್ ಪಾರ್ಥಿವ ಶರೀರ ಹಾಸನ ತಲುಪಿದೆ. ನಿನ್ನೆ ರಾತ್ರಿ ಬೆಂಗಳೂರಿನಿಂದ ಹೊರಟ ಹುತಾತ್ಮ ಯೋಧನ ಪಾರ್ಥಿವ ಶರೀರ ತಡರಾತ್ರಿ 12.30ರ ಸುಮಾರಿಗೆ ಹಾಸನಕ್ಕೆ ಆಗಮಿಸಿತು.. ತಡರಾತ್ರಿ ಆಗಿದ್ದರಿಂದ ಹುತಾತ್ಮನ ಪಾರ್ಥಿವ ಶರೀರವನ್ನು ಜಿಲ್ಲಾಸ್ಪತ್ರೆಯಲ್ಲಿ ಇಡಲಾಗಿತ್ತು. ಬೆಳಗ್ಗೆ 8 ಗಂಟೆ ಬಳಿಕ ಜಿಲ್ಲಾಧಿಕಾರಿ ಕಚೇರಿ ಮುಂದೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಗಣ್ಯರು ಸೇರಿದಂತೆ ಸಾರ್ವಜನಿಕರು ಯೋಧನಿಗೆ ಅಂತಿಮ ನಮನ ಸಲ್ಲಿಸಲಿದ್ದಾರೆ.
ಮಧ್ಯಾಹ್ನ ದೇವಿಹಳ್ಳಿಯಲ್ಲಿ ಅಂತ್ಯಸಂಸ್ಕಾರ
ಹಾಸನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಂತಿಮ ನಮನ ಸಲ್ಲಿಸಿದ ಬಳಿಕ ಹುಟ್ಟೂರು ದೇವಿಹಳ್ಳಿವರೆಗೆ ಮೆರವಣಿಗೆ ಮೂಲಕ ಕೊಂಡೊಯ್ಯಲಾಗುವುದು.. ಸಂದೀಪ್ ಮನೆಯಲ್ಲಿ ಅಂತಿಮ ವಿಧಿವಿಧಾನ ಸಲ್ಲಿಸಿದ ಬಳಿಕ ಹಿಂದೂ ಸಂಪ್ರದಾಯದಂತೆ ಸಕಲ ಸರ್ಕಾರಿ ಗೌರವಗೊಳೊಂದಿಗೆ ಅಂತ್ಯಸಂಸ್ಕಾರ ನಡೆಯಲಿದೆ.
via suvarannews

loading...

No comments