Breaking News

ಹೆದ್ದಾರಿ ಕಾಮಗಾರಿ ಪೂರ್ತಿಗೊಳ್ಳುವ ಮುನ್ನವೇ ಟೋಲ್ ಸಂಗ್ರಹ

ಟೋಲ್‌ಗೇಟ್ ಉದ್ವಿಗ್ನ

ಪೊಲೀಸ್ ಭದ್ರತೆಯಲ್ಲಿ ಟೋಲ್ ಸಂಗ್ರಹ
ಮಂಗಳೂರು - ನಿನ್ನೆಯಿಂದ ಆರಂಭವಾಗಿರುವ ತಲಪಾಡಿ ಟೋಲ್‌ಗೇಟ್ ವಿರುದ್ಧ ಸ್ಥಳೀಯರು ಇಂದು ಮುಂಜಾನೆ ಮತ್ತೆ ಪ್ರತಿಭಟನೆ ನಡೆಸಿದ್ದಾರೆ. ನೂರಾರು ಸಂಖ್ಯೆಯ ಸಾರ್ವಜನಿಕರು ಟೋಲ್‌ಗೇಟ್ ಮುಂದೆ ಜಮಾಯಿಸಿ ಟೋಲ್ ಸಂಗ್ರಹದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಲ್ಲದೆ ಹೆದ್ದಾರಿ ಕಾಮಗಾರಿ ಪೂರ್ತಿಗೊಳ್ಳುವ ಮುನ್ನವೇ ಟೋಲ್ ಸಂಗ್ರಹ ನಡೆಸಲು ಅವಕಾಶ ನೀಡುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ. ಸಾರ್ವಜನಿಕರು ಹೆದ್ದಾರಿಯಲ್ಲಿ ಮಲಗಿ ಪ್ರತಿಭಟನೆಗಿಳಿದಿದ್ದು ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕಾಗಮಿಸಿದ ಪೊಲೀಸರು ಟೋಲ್‌ಗೇಟ್‌ಗೆ ಬಿಗಿ ಭದ್ರತೆ ಒದಗಿಸಿದ್ದಾರೆ.
ನಿನ್ನೆ ಟೋಲ್‌ಗೇಟ್‌ನಲ್ಲಿ ಟೋಲ್ ಸಂಗ್ರಹ ಆರಂಭವಾಗುತ್ತಲೇ ಸ್ಥಳೀಯರು ಟೋಲ್ ಸಂಗ್ರಹದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ರಸ್ತೆಯಲ್ಲಿ ಮಲಗಿ ವಾಹನಗಳಿಗೆ ತಡೆಯೊಡ್ಡಿದ್ದಲ್ಲದೆ ಟೋಲ್ ಸಂಗ್ರಹದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೊನೆಗೆ ಸ್ಥಳಕ್ಕೆ ಬಂದ ಪೊಲೀಸರು ಹಲವರನ್ನು ಬಂಧಿಸಿ ಠಾಣೆಗೆ ಕರೆದೊಯ್ದು ಪ್ರಕರಣ ದಾಖಲಿಸಿಕೊಂಡಿದ್ದರು. ಆದರೂ ಮಧ್ಯಾಹ್ನದವರೆಗೆ ಟೋಲ್‌ಗೇಟ್‌ನಲ್ಲಿ ನೂರಾರು ಸಂಖ್ಯೆಯಲ್ಲಿದ್ದ ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ. ಇಂದು ಮುಂಜಾನೆ ಮತ್ತೆ ಟೋಲ್‌ಗೇಟ್‌ನಲ್ಲಿ ಸುಂಕ ಪಡೆಯುವುದನ್ನು ತಡೆದ ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಅವ್ಯವಸ್ಥೆಯಿಂದ ಕೂಡಿದೆ. ಹೆದ್ದಾರಿಯನ್ನು ಸಮರ್ಪಕಗೊಳಿಸಿ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸುವ ಮುನ್ನವೇ ವಾಹನ ಸವಾರರಿಂದ ಸುಂಕ ಸಂಗ್ರಹಕ್ಕೆ ಇಳಿದಿರುವುದು ಸರಿಯಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಇಂದು ಮತ್ತೆ ಪ್ರತಿಭಟನೆ ನಡೆದಿದ್ದರಿಂದ ಗಂಟೆಗಳ ಕಾಲ ವಾಹನ ಸಂಚಾರಕ್ಕೆ ಅಡಚಣೆಯುಂಟಾಯಿತು. ಪೊಲೀಸರು ಟೋಲ್ ಸಂಗ್ರಹ ಬೂತ್‌ಗೆ ಹೆಚ್ಚಿನ ಭದ್ರತೆ ಒದಗಿಸಿದ್ದಾರೆ.
loading...

No comments