Breaking News

ಸರ್ಕಾರಿ ನೌಕರಿಯಲ್ಲಿ ಬಡ್ತಿ ಮೀಸಲಾತಿ ರದ್ದು


ನವದೆಹಲಿ: ಸರ್ಕಾರಿ ನೌಕರಿಯಲ್ಲಿ ಬಡ್ತಿ ಮೀಸಲಾತಿ ವಿಧಾನ ಅನುಸರಿಸುವ ರಾಜ್ಯ ಸರ್ಕಾರದ 2002ರ ಕಾಯ್ದೆಯನ್ನು ರದ್ದುಪಡಿಸಿರುವ ಸುಪ್ರೀಂ ಕೋರ್ಟ್‌, ಹೊಸ ಜ್ಯೇಷ್ಠತಾ ಪಟ್ಟಿಯನ್ನು ಮೂರು ತಿಂಗಳೊಳಗೆ ಪರಿಷ್ಕರಿಸಿ ಸಿದ್ಧಪಡಿಸಬೇಕು ಎಂದು ಆದೇಶಿಸಿದೆ.

ಬಡ್ತಿ ಹುದ್ದೆಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಸಮ ಪ್ರಮಾಣದ ಪ್ರಾತಿನಿಧ್ಯ ಇಲ್ಲ ಎಂಬ ಒಂದೇ ಕಾರಣದಿಂದ ಸೇವೆಯಲ್ಲಿ ಕಿರಿಯರಾಗಿದ್ದರೂ ಸಾಂದರ್ಭಿಕ ಹಿರಿತನ ನೀಡಿ ಆ ಮೂಲಕ ಇತರರಿಗೆ ಬಡ್ತಿಯನ್ನು ನಿರಾಕರಿಸುವುದು ಸರಿಯಲ್ಲ ಎಂದು ನ್ಯಾಯಮೂರ್ತಿಗಳಾದ ಆದರ್ಶಕುಮಾರ್‌ ಗೋಯೆಲ್‌ ಹಾಗೂ ಯು.ಯು. ಲಲಿತ್‌ ಅವರನ್ನು ಒಳಗೊಂಡ ಪೀಠ ಮಹತ್ವದ ತೀರ್ಪು ನೀಡಿದೆ.

loading...

No comments