Breaking News

ಕಾಶ್ಮೀರ ಗಡಿ ನುಸುಳಲು ಯತ್ನಿಸಿದ ಉಗ್ರರನ್ನು ಹಿಮ್ಮೆಟ್ಟಿಸಿದ ಸೇನೆ


ಜಮ್ಮು : ಕಾಶ್ಮೀರದ ಸಾಂಬಾ ಜಿಲ್ಲೆಯಲ್ಲಿ ಸಾಕಷ್ಟು ಶಸ್ತ್ರಸಜ್ಜಿತರಾಗಿ ಬಂದಿದ್ದ ಉಗ್ರರ ಗುಂಪೊಂದು ಸಾಂಬಾ ಜಿಲ್ಲೆಯ ಅಂತರಾಷ್ಟ್ರೀಯ ಗಡಿ ಪ್ರದೇಶದ ಬಳಿ ಬಂದು ಭಾರತ ಒಳನುಸುಳಲು ಯತ್ನ ನಡೆಸುತ್ತಿದ್ದರು. ಈ ವೇಳೆ ಸೇನೆ ದಿಟ್ಟ ಉತ್ತರ ನೀಡುವ ಮೂಲಕ ಉಗ್ರರು ಕಾಲ್ಕಿತ್ತುವಂತೆ ಮಾಡಿದ್ದಾರೆ.

ದಡ್ಡ ಕಾಡುಗಳನ್ನೇ ಅನುಕೂಲಕ್ಕೆ ಬಳಸಿಕೊಳ್ಳಲು ಉಗ್ರರ ಗುಂಪು ಯತ್ನ ನಡೆಸಿದ್ದು, ಮಧ್ಯಾಹ್ನ 3.30ರ ಸುಮಾರಿಗೆ ಉಗ್ರರು ಬಿಎಸ್ಎಫ್ ಸೇನಾ ಶಿಬಿರದ ಮೇಲೆ ದಾಳಿ ಮಾಡಿದ್ದರು. ಮೂರು ಅಂಡರ್ ಬ್ಯಾರೆಲ್ ಗ್ರೆನೇಡ್ ಗಳನ್ನು ಸ್ಫೋಟಿಸಿದ್ದರು. ಈ ವೇಳೆ ಕೂದಲೆಳೆಯ ಅಂತರದಲ್ಲಿ ಯೋಧನೊಬ್ಬ ಪಾರಾಗಿದ್ದಾನೆ. ನಂತರ ಉಗ್ರರಿಗೆ ಸೇನೆ ದಿಟ್ಟ ಉತ್ತರವನ್ನು ನೀಡಿ ಸ್ಥಳದಿಂದ ಕಾಲ್ಕಿತ್ತುವಂತೆ ಮಾಡಿತ್ತು ಎಂದು ಅಧಿಕಾರಿಗಳು ಹೇಳಿದ್ದಾರೆ.
-kannada prabha 


loading...

No comments