ರಾಜ್ಯಪಾಲರ ಬೇಟಿಯ ಬಳಿಕ ತಮಿಳುನಾಡು ರಾಜಕೀಯದಲ್ಲಿ ಬಿಗ್ ಟ್ವಿಸ್ಟ್
ಚೆನ್ನೈ: ಶಶಿಕಲಾ ನಟರಾಜನ್ ಮುಖ್ಯಮಂತ್ರಿಯಾಗುವುದನ್ನು ವಿರೋಧಿಸಿ ಬಂಡಾಯ ಎದ್ದಿರುವ ಉಸ್ತುವಾರಿ ಮುಖ್ಯಮಂತ್ರಿ ಓ. ಪನ್ನೀರ್‌ಸೆಲ್ವಂ ಗುರುವಾರ ರಾಜ್ಯಪಾಲರನ್ನು ಭೇಟಿಯಾಗಿದ್ದಾರೆ.
ರಾಜ್ಯಪಾಲ ಸಿ. ವಿದ್ಯಾಸಾಗರ ರಾವ್‌ರನ್ನು ಭೇಟಿಯಾಗಿರುವ ಉಸ್ತುವಾರಿ ಮುಖ್ಯಮಂತ್ರಿ ಪನ್ನೀರ್‌ಸೆಲ್ವಂ ತಾನು ಶಶಿಕಲಾ ಅವರ ಒತ್ತಾಯಕ್ಕೆ ಮಣಿದು ರಾಜೀನಾಮೆ ನೀಡಿರುವುದಾಗಿ ಹೇಳಿದ್ದಾರೆ.
ತಾಜಾ ವರದಿಗಳ ಪ್ರಕಾರ, ಗುರುವಾರ ತಮಿಳುನಾಡಿಗೆ ಆಗಮಿಸಿದ ರಾಜ್ಯಪಾಲ ವಿದ್ಯಾಸಾಗರ್ ಅವರನ್ನು ಭೇಟಿಯಾಗಿದ್ದಾರೆ. ಸುಮಾರು 15 ನಿಮಿಷಗಳ ಕಾಲ ನಡೆದ ಜರ್ಚೆಯಲ್ಲಿ ಶಶಿಕಲಾ ವಿರುದ್ಧ ಸೆಲ್ವಂ ದೂರಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.
loading...
No comments