ಕೋಟ್ ಧರಿಸಿ ಸ್ನಾನ ಮಾಡುವ ಕಲೆ ಮನಮೋಹನ್ ಸಿಂಗ್‌ಗೆ ಮಾತ್ರ ಕರಗತ: ಪ್ರಧಾನಿ ಮೋದಿ ಲೇವಡಿ
ಹೊಸದಿಲ್ಲಿ: ಲೋಕ ಸಭೆಯಲ್ಲಿ ಕಾಂಗ್ರೆಸ್ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಮಾತು ಮುಂದುವರಿದಿದ್ದು, ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್‌ಗೆ ಮಾತ್ರ ಅವರಿಗೆ ಮಳೆ ಬೀಳುತ್ತಿದ್ದಾಗ ರೈನ್‌ಕೋಟ್ ಧರಿಸಿ ಸ್ನಾನ ಮಾಡಲು ಗೊತ್ತು ಎಂದು ಮೋದಿ ವ್ಯಂಗ್ಯವಾಡಿದ್ದಾರೆ.
ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಕುರಿತ ಚರ್ಚೆಗೆ ರಾಜ್ಯಸಭೆಯಲ್ಲಿ ಉತ್ತರ ನೀಡುತ್ತ ಪ್ರಧಾನಿ ನರೇಂದ್ರ ಮೋದಿ ಈ ವಿಚಾರಗಳನ್ನು ಪ್ರಸ್ತಾಪಿಸಿದರು.
ಕಾಂಗ್ರೆಸ್ ಅವಧಿಯಲ್ಲಿ ಸಾಕಷ್ಟು ಹಗರಣಗಳು ನಡೆದಿವೆ. ಆದರೆ ಯಾವುದೇ ಪ್ರಕರಣದಲ್ಲೂ ಮನಮೋಹನ್ ಸಿಂಗ್ ಅವರ ಹೆಸರು ಇರಲಿಲ್ಲ. ಹೀಗಾಗಿ ಮನಮೋಹನ್ ಸಿಂಗ್ ಅವರಿಗೆ ಮಾತ್ರ ಮಳೆ ಸಂದರ್ಭದಲ್ಲೂ ರೈನ್‌ಕೋಟ್ ಧರಿಸಿ ಸ್ನಾನ ಮಾಡಲು ತಿಳಿದಿದೆ ಎಂದು ಮೋದಿ ಹೇಳಿದರು.
ಮೋದಿ ಹೇಳಿಕೆಗೆ ಕೆಲ ಕಾಂಗ್ರೆಸ್ ನಾಯಕರು ವಿರೋಧ ವ್ಯಕ್ತಪಡಿಸಿದರು. ಅಲ್ಲದೇ ಸಭೆಯಿಂದ ಹೊರ ನಡೆದರು.
vijaya karanataka
loading...
No comments