Breaking News

ತಮಿಳುನಾಡು ಸಿಎಂ ಪಟ್ಟಕ್ಕೆ ಏರಲು ಶಶಿಕಲಾ ಸಿದ್ಧತೆ ?


ತಮಿಳುನಾಡು ಮುಖ್ಯಮಂತ್ರಿ ಜಯಲಿಲಿತಾ ನಿಧನದ ನಂತರ ಎಐಎಡಿಎಂಕೆಯಲ್ಲಿ ದಿನಕ್ಕೊಂದು ನಾಟಕೀಯ ಬೆಳವಣೆಗೆಗಳು ನಡೆಯುತ್ತಿದ್ದು, ‘ಅಮ್ಮ’ನಿಂದ ತೆರವಾದ ಸ್ಥಾನಕ್ಕೆ ‘ಚಿನ್ನಮ್ಮ’ ಶಶಿಕಲಾ ನಟರಾಜನ್ ಅವರನ್ನು ಪ್ರತಿಷ್ಠಾಪಿಸಲು ಸಿದ್ಧತೆಗಳು ಭರದಿಂದ ಸಾಗಿದೆ.

ಇತ್ತೀಚೆಗೆ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗುವಲ್ಲಿ ಯಶಸ್ವಿಯಾಗಿರುವ ಶಶಿಕಲಾ, ರಾಜ್ಯದ ಮುಖ್ಯಮಂತ್ರಿ ಪಟ್ಟಕ್ಕೇರುವುದಕ್ಕೆ ಮುಹೂರ್ತ ಸನ್ನಿಹಿತವಾಗಿದೆ.  ಎಐಎಡಿಎಂಕೆ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಶಿಕಲಾ ಅವರನ್ನು ತಮ್ಮ ನೂತನ ನಾಯಕಿಯಾಗಿ ಸರ್ವಾನುಮತದಿಂದ ಆಯ್ಕೆ ಮಾಡಿಕೊಳ್ಳವ ಸಾಧ್ಯತೆ ಇದೆ.

ಹಾಲಿ ಮುಖ್ಯಮಂತ್ರಿ ಓ.ಪನ್ನೀರ್‌ಸೆಲ್ವಂ ಅವರನ್ನು ಕೆಳಗಿಳಿಸಿ ಶಶಿಕಲಾ ಅವರನ್ನು ಮುಖ್ಯಮಂತ್ರಿ ಪಟ್ಟಕ್ಕೇರಿಸಲಾಗುತ್ತಿದೆ. ಇದೇ ಉದ್ದೇಶಕ್ಕಾಗಿ ಶಶಿಕಲಾ ನಟರಾಜನ್ ಎಐಎಡಿಎಂಕೆ ಪಕ್ಷದ ಸಭೆ ಕರೆದಿದ್ದು, ಸಭೆಯಲ್ಲಿ ಈ ಬಗ್ಗೆ ಅಧಿಕೃತ ನಿರ್ಧಾರ ಕೈಗೊಳ್ಳಲಿದ್ದಾರೆ. ತಮಿಳುನಾಡು ನೂತನ ಮುಖ್ಯಮಂತ್ರಿಯಾಗಿ ಶಶಿಕಲಾ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದ್ದು, ಈ ಕುರಿತು ತಯಾರಿ ನಡೆದಿದೆ. ಶಶಿಕಲಾ ಅವರ ಆಪ್ತ ಜ್ಯೋತಿಷಿಗಳು ಈ ಬಗ್ಗೆ ಸಲಹೆ ನೀಡಿದ್ದಾರೆ ಎನ್ನಲಾಗಿದೆ.

ಈ ನಿಟ್ಟಿನಲ್ಲಿ ಸೋಮವಾರ ಶಶಿಕಲಾ ನಟರಾಜನ್ ತಮಿಳುನಾಡಿನ ಸಿಎಂ ಆಗಿ ಪದಗ್ರಹಣ ಮಾಡಲಿದ್ದು, ಅಂದು ರಾಜ್ಯದ ಎಲ್ಲಾ ಶಿವ ದೇವಾಲಯಗಳಲ್ಲಿ ಕುಂಬಾಭಿಷೇಕ ನಡೆಯಲಿದೆ ಎಂದು ಎಐಎಡಿಎಂಕೆ ಪಕ್ಷದ ಉನ್ನತ ಮೂಲಗಳಿಂದ ತಿಳಿದುಬಂದಿದೆ. ಮಧ್ಯಾಹ್ನ ಪ್ರಧಾನ ಕಾರ್ಯದರ್ಶಿ ಶಶಿಕಲಾ ನಟರಾಜನ್ ಅವರ ನೇತೃತ್ವದಲ್ಲಿ ಶಾಸಕರ ಸಭೆ ನಡೆಯಲಿದ್ದು, ಮಹತ್ವ ನಿರ್ಧಾರ ಕೈಗೊಳ್ಳವ ಸಾಧ್ಯತೆ ಇದೆ ಎಂದು ಸ್ಥಳೀಯ ಅಣ್ಣಾ ನ್ಯೂಸ್ ವಾಹಿನಿ ಕೂಡ ಪ್ರಕಟಿಸಿದೆ.

loading...

No comments