ಕೊಲ್ಲಿ ರಾಷ್ಟ್ರದಲ್ಲಿ ನಾಡಪ್ರಭು ಕೆಂಪೇಗೌಡ ಅಂತಾರಾಷ್ಟ್ರೀಯ ಉತ್ಸವ
ದುಬೈ- ವಿಶ್ವ ಒಕ್ಕಲಿಗರ ಮಹಾ ವೇದಿಕೆ ವತಿಯಿಂದ ಇಂದು ದುಬೈನಲ್ಲಿ ನಾಡಪ್ರಭು ಕೆಂಪೇಗೌಡ ಅಂತಾರಾಷ್ಟ್ರೀಯ ಉತ್ಸವ -60 ಕನ್ನಡಿಗರ ಸಂಭ್ರಮವನ್ನು ವಿಜೃಂಭಣೆಯಿಂದ ಆಚರಿಸಿತು. ಇದೇ ವೇಳೆ ಸಾಗರದಾಚೆ ಸಂಕ್ರಾಂತಿ ಎಂಬ ವಿಶಿಷ್ಟ ಕಲಾ ಪ್ರದರ್ಶನ ಎಲ್ಲರನ್ನು ರಂಜಿಸಿತು. ಕನ್ನಡ ನಾಡು, ನುಡಿ ಸಂಸ್ಕøತಿಯನ್ನು ಪ್ರತಿಬಿಂಬಿಸುವ ಉಡುಗೆಯೊಂದಿಗೆ ನೂರಾರು ಮಂದಿ ಕನ್ನಡಿಗರು ಪಾಲ್ಗೊಂಡಿದ್ದು, ವಿಶೇಷವಾಗಿತ್ತು. ದುಬೈನಲ್ಲಿನ ಕ್ರೌನ್ ಪ್ಲಾಜಾ ಎಸ್‍ಜೆಡ್‍ಆರ್‍ನಲ್ಲಿ ನಡೆದ ಅರ್ಥಪೂರ್ಣ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಹಾಸಂಸ್ಥಾನದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಸೇರಿದಂತೆ ಹಲವು ಗಣ್ಯರು ಪಾಲ್ಗೊಂಡಿದ್ದರು.
-eesanje
loading...
No comments