Breaking News

ಶಶಿಕಲಾ ನಟರಾಜನ್ ತಮಿಳುನಾಡಿನ ಸಿಎಂ ಆಗಲು ಅವಕಾಶ ನೀಡದಂತೆ ಪ್ರಧಾನಿಗೆ ಮನವಿ


ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ವಿ.ಕೆ.ಶಶಿಕಲಾ ನಟರಾಜನ್ ಪದಗ್ರಹಣಕ್ಕೆ ಸಕಲ ಸಿದ್ದತೆಗಳು ನಡೆದಿರುವಾಗಲೇ. ಅವರು ಅಧಿಕಾರ ಸ್ವೀಕಾರಕ್ಕೆ ಅವಕಾಶ ನೀಡಬಾರದೆಂದು ಆಗ್ರಹಿಸಿ ರಾಜ್ಯಸಭಾ ಸದಸ್ಯೆ ಶಶಿಕಲಾ ಪುಷ್ಟಾ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಇದರೊಂದಿಗೆ ಶಶಿಕಲಾದ್ವಯರ ಬದ್ಧ ವೈರತ್ವ ಮತ್ತಷ್ಟು ತೀವ್ರಗೊಂಡಂತಾಗಿದೆ.  ಶಶಿಕಲಾ ನಟರಾಜನ್ ತಮಿಳುನಾಡು ಮುಖ್ಯಮಂತ್ರಿಯಾಗಲು ಅರ್ಹರಲ್ಲ. ಅವರ ವಿರುದ್ಧ ಅನೇಕ ಕ್ರಿಮಿನಲ್  ಪ್ರಕರಣಗಳಿವೆ. ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಲು ಅವಕಾಶ ನೀಡಿದರೆ ಇದರಿಂದ ನ್ಯಾಯಾಂಗ ನಿಂದನೆಯಾಗುತ್ತದೆ. ಅವರು ಮುಖ್ಯಮಂತ್ರಿಯಾದರೆ ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣ ಹದಗೆಡಲಿದೆ ಎಂದು ಅವರು ಮನವಿ ಪತ್ರದಲ್ಲಿ ವಿವರಿಸಿದ್ದಾರೆ.

loading...

No comments