Breaking News

ಕೆರೆ ಹೂಳೆತ್ತುವ ಕಾರ್ಯಕ್ಕೆ ಚಾಲನೆ ನೀಡುವ ಮೂಲಕ ಜನ್ಮದಿನ ಆಚರಿಸಿಕೊಳ್ಳಲಿದ್ದಾರೆ : ಬಿ ಎಸ್ ವೈ


ಸರಳ ಹುಟ್ಟುಹಬ್ಬ ಆಚರಣೆಗೆ ಬಿಎಸ್‌ವೈ ಮನವಿ
ಬೆಂಗಳೂರು : ರಾಜ್ಯ ಬಿಜೆಪಿ ಅಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ನಾಳೆ ತಮ್ಮ ಹುಟ್ಟುಹಬ್ಬವನ್ನು ಕೆರೆ ಹೂಳೆತ್ತುವ ಕಾರ್ಯಕ್ಕೆ ಚಾಲನೆ ನೀಡುವ ಮೂಲಕ ವಿಶಿಷ್ಟ ರೀತಿಯಲ್ಲಿ ಜನ್ಮದಿನ ಆಚರಿಸಿಕೊಳ್ಳಲಿದ್ದಾರೆ.

ರಾಜ್ಯದಲ್ಲಿ ಬರ ಪರಿಸ್ಥಿತಿ ಇರುವುದರಿಂದ ಹುಟ್ಟುಹಬ್ಬವನ್ನು ಸಂಭ್ರಮದ ಆಚರಣೆ ಬೇಡ ಎಂದು ಪಕ್ಷದ ಕಾರ್ಯಕರ್ತರು ಮತ್ತು ಅಭಿಮಾನಿಗಳಿಗೆ ಅವರು ಮನವಿ ಮಾಡಿದ್ದಾರೆ.

ಹುಟ್ಟುಹಬ್ಬದ ಅಂಗವಾಗಿ ನಾಳೆ ಬೆಳಿಗ್ಗೆ ಯಡಿಯೂರಪ್ಪನವರು ಸಿದ್ದಗಂಗಾ ಮಠಕ್ಕೆ ತೆರಳಿ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ಆಶೀರ್ವಾದ ಪಡೆಯುವರು. ನಂತರ ತುಮಕೂರು ತಾಲ್ಲೂಕಿನ ಬೆಳ್ಳಾವಿ ಕೆರೆಯಲ್ಲಿ ಹೂಳೆತ್ತುವ ಕಾರ್ಯಕ್ಕೆ ಚಾಲನೆ ನೀಡುವ ಮೂಲಕ ಜನ್ಮದಿನ ಆಚರಿಸಿಕೊಳ್ಳುವರು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಹುಟ್ಟುಹಬ್ಬದ ಅಂಗವಾಗಿ ಯಾವುದೇ ಸಂಭ್ರಮಾಚರಣೆ ಮಾಡದೆ ಹಾರ ಮತ್ತಿತರ ಉದ್ದೇಶಗಳಿಗೆ ಹಣ ವೆಚ್ಚ ಮಾಡದೆ ಅದೇ ಹಣವನ್ನು ಜಾನುವಾರುಗಳಿಗೆ ಮೇವು ಒದಗಿಸಲು ಬಳಸುವಂತೆ ಅವರು ಪಕ್ಷದ ಕಾರ್ಯಕರ್ತರಿಗೆ ಮನವಿ ಮಾಡಿದ್ದಾರೆ.

loading...

No comments