Breaking News

ಬಿಎಸ್‍ವೈ ಸಿಎಂ ಆಗುವುದು ನಿಶ್ಚಿತ’ : ಕೆ.ಎಸ್.ಈಶ್ವರಪ್ಪ


ಶಿವಮೊಗ್ಗ : ‘ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಯಾರೂ ಎಷ್ಟೇ ಪ್ರಯತ್ನಿಸಿದರೂ ಬಿಜೆಪಿ ಅಧಿಕಾರಕ್ಕೆ ಬರುವುದನ್ನು ತಡೆಯಲು ಸಾಧ್ಯವಿಲ್ಲ. ಹಾಗೆಯೇ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗುವುದು ನೂರಕ್ಕೆ ನೂರರಷ್ಟು ನಿಶ್ಚಿತವಾಗಿದ್ದು, ಇದರಲ್ಲಿ ಯಾವುದೇ ಅನುಮಾನ ಬೇಡವಾಗಿದೆ’ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೆ. ಎಸ್. ಈಶ್ವರಪ್ಪ ತಿಳಿಸಿದ್ದಾರೆ.
ನಗರದ ದೈವಜ್ಞ ಕಲ್ಯಾಣ ಮಂದಿರದಲ್ಲಿ ಪಂಡಿತ್ ದೀನದಯಾಳು ಉಪಾಧ್ಯಾಯ ಅವರ ಜನ್ಮಶತಾಬ್ದಿ ವರ್ಷಾಚರಣೆ ಅಂಗವಾಗಿ ಜಿಲ್ಲಾ ಬಿಜೆಪಿಯಿಂದ ಏರ್ಪಡಿಸಿದ್ದ ವಿಶೇಷ ಕಾರ್ಯಕಾರಿಣಿ ಸಭೆ ಉದ್ಗಾಟಿಸಿ ಅವರು ಮಾತನಾಡಿದರು.
ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಕುಸಿದಿದೆ. ಇದನ್ನು ಜನಮಾತ್ರವಲ್ಲ ಆಡಳಿತ ಪಕ್ಷ ಕಾಂಗ್ರೆಸ್‍ನ ಹಿರಿಯ ನಾಯಕರೇ ಒಪ್ಪಿಕೊಂಡಿದ್ದಾರೆ. ಈ ಸರ್ಕಾರ ತೊಲಗಲಿ ಎಂದು ಹೇಳುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಎಸ್.ಎಂ.ಕೃಷ್ಣ, ಜನಾರ್ಧನ ಪೂಜಾರಿ, ಹೆಚ್.ವಿಶ್ವನಾಥ್, ಜಾಫರ್ ಶರೀಫ್ ಮೊದಲಾದವರು ಸರ್ಕಾರದ ನಡೆಯನ್ನು ಟೀಕಿಸಿದ್ದಾರೆ ಎಂದರು.


loading...

No comments