Breaking News

ಮೋದಿಯ ರಮ್ಜಾನ್, ಕಬ್ರಿಸ್ತಾನ್ ಹೇಳಿಕೆ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಲು ಮುಂದಾದ ಕಾಂಗ್ರೆಸ್.

ಉತ್ತರಪ್ರದೇಶ : ಉತ್ತರಪ್ರದೇಶದ ಫತೇಪುರ್ ನಲ್ಲಿ ಭಾನುವಾರ ನಡೆದ ರ್ಯಾಲಿ ವೇಳೆ ಪ್ರಧಾನಿ ನರೇಂದ್ರ ಮೋದಿ ನೀಡಿದ ವಿವಾದಾದ್ಮಕ ಹೇಳಿಕೆ ವಿರುದ್ಧ ಕಾಂಗ್ರೆಸ್ ಪಕ್ಷ ಚುನಾವಣಾ ಆಯೋಗಕ್ಕೆ ದೂರು ನೀಡಲು ನಿರ್ಧರಿಸಿದೆ.
ಭಾನುವಾರ ಫತೇಪುರ್ ರ್ಯಾಲಿಯಲ್ಲಿ ಭಾಷಣ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿಯವರು "ಮುಸ್ಲಿಮರ ರಮ್ಜಾನ್ ಹಬ್ಬದ ದಿನ ವಿದ್ಯುತ್ ಇರುವುದಾದರೆ ಹಿಂದೂಗಳ ದೀಪಾವಳಿ ಹಬ್ಬದಂದೂ ಇರಬೇಕು, ಮುಸಲ್ಮಾನರಿಗೆ ಅಂತ್ಯಸಂಸ್ಕಾರಕ್ಕಾಗಿ ಕಬ್ರೀಸ್ತಾನ್ ಇರುವುದಾದರೆ ಹಿಂದೂಗಳಿಗೂ ಅಂತ್ಯಸಂಸ್ಕಾರ ಮಾಡಲು ಸ್ಮಾಶಾನಗಳು ಇರಬೇಕು. ರಾಜಕೀಯ ಪಕ್ಷಗಳು ಜಾತಿ ಧರ್ಮದ ಆಧಾರದಲ್ಲಿ ತಾರತಮ್ಯ ಮಾಡಬಾರದು.  ನಮ್ಮದು ಸಬ್ಕಾ ಸಾತ್ ಸಬ್ಕಾ ವಿಕಾಸ್ ಎಂದು ಹೇಳಿಕೆ ನೀಡಿದ್ದರು.
ಈ ಕುರಿತು ಸೋಮವಾರ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಕಾಂಗ್ರೆಸ್ ಪಕ್ಷದ ಕಾನೂನು ಹಾಗೂ ಮಾನವ ಹಕ್ಕುಗಳ ಇಲಾಖೆಯ ಕಾರ್ಯದರ್ಶಿ ಕೆ.ಸಿ.ಮಿತ್ತಲ್ ಅವರು,  ಉತ್ತರ ಪ್ರದೇಶದ ಫತೇಪುರ್ ರ್ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೀಡಿದ ಹೇಳಿಕೆಯ ವಿರುದ್ದ ಚುನಾವಣಾ ಆಯೋಗಕ್ಕೆ ದೂರು ನೀಡಲು ನಿರ್ಧರಿಸಲಾಗಿದೆ ಎಂದು ಹೇಳಿದರು.
loading...

No comments