ಷರೀಫ್, ಪೂಜಾರಿ ವಿಶ್ವನಾಥ್ ಅವರಿಗೆ ಗೇಟ್ ಪಾಸ್ ನೀಡಲು ಆಗ್ರಹ
ಬೆಂಗಳೂರು: ಪಕ್ಷ ಹಾಗೂ ಸರ್ಕಾರದ ವಿರುದ್ಧ ಬಹಿರಂಗವಾಗಿ ಮಾತನಾಡುತ್ತಿರುವ ಪಕ್ಷದ ಹಿರಿಯ ನಾಯಕರ ಬಾಯಿ ಮುಚ್ಚಿಸುವಂತೆ ಮತ್ತು ಶಿಸ್ತು ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ಶಾಸಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪರಮೇಶ್ವರ್ ಗೆ ಆಗ್ರಹಿಸಿದ್ದಾರೆ.
ಬುಧವಾರ ನಡೆದ ಪಕ್ಷದ ಶಾಸಕಾಂಗ ಸಭೆಯಲ್ಲಿ ಹನೂರು ಶಾಸಕ ನರೇಂದ್ರ, ಪಕ್ಷದ ಹಿರಿಯ ನಾಯಕರಾದ ಜನಾರ್ದನ ಪೂಜಾರಿ, ಎಚ್. ವಿಶ್ವನಾಥ್ ಹಾಗೂ ಸಿ.ಕೆ. ಜಾಫರ್ ಷರೀಫ್ ಅವರು ಪಕ್ಷ ಹಾಗೂ ಸರ್ಕಾರದ ಬಗ್ಗೆ ಬಹಿರಂಗವಾಗಿ ಮಾತನಾಡುತ್ತಿದ್ದಾರೆ. ಇದರಿಂದ ಪಕ್ಷಕ್ಕೆ ಸಾಕಷ್ಟು ಮುಜುಗರವಾಗುತ್ತಿದೆ. ಅದನ್ನು ನಿಲ್ಲಿಸಬೇಕು ಎಂದು ಸಭೆಯಲ್ಲಿ ಆಗ್ರಹಿಸಿದರು. . ಅವರ ಮಾತಿಗೆ ಬಹುತೇಕ ಶಾಸಕರು ಬೆಂಬಲ ವ್ಯಕ್ತಪಡಿಸಿದರು.
ಈ ಬಗ್ಗೆ ಪಕ್ಷದ ಸಮನ್ವಯ ಸಮಿತಿ ಸಭೆಯಲ್ಲಿ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳುವ ಭರವಸೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಪರಮೇಶ್ವರ್ ನೀಡಿದರು.
loading...
No comments