Breaking News

ದೇಶದಲ್ಲಿ ಹಿಂದೂಗಳು ಬಹುಸಂಖ್ಯಾತರಾಗಿರುವುದರಿಂದ ಪ್ರಜಾಪ್ರಭುತ್ವ ಉಳಿದಿದೆ : ಸುಬ್ರಹ್ಮಣ್ಯ ಸ್ವಾಮಿ

ನವದೆಹಲಿ (ANI) : ಭಾರತದಲ್ಲಿ ಹಿಂದೂಗಳು ಬಹು ಸಂಖ್ಯಾತರಾಗಿರುವುದರಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಯಾಗಿ ಬೇರೂರಿದೆ ಎಂದು ಡಾ ಸುಬ್ರಹ್ಮಣ್ಯ ಸ್ವಾಮಿ ಹೇಳಿದ್ದಾರೆ. ಕೇಂದ್ರ ಗೃಹ ಖಾತೆ ರಾಜ್ಯ ಸಚಿವರಾಗಿರುವ ಕಿರಣ್ ರಿಜಿಜು ನಿನ್ನೆ 'ಹಿಂದೂಗಳು ಮತಾಂತರ ಕಾರ್ಯಕ್ಕೆ ಕೈ ಹಾಕದೆ ಇರುವುದರಿಂದ ಭಾರತದಲ್ಲಿ ಹಿಂದುಗಳ ಸಂಖ್ಯೆ ಕ್ಷೀಣಿಸುತ್ತಿದೆ, ಅಲ್ಪಸಂಖ್ಯಾತರ ಸಂಖ್ಯೆ ಹೆಚ್ಚುತ್ತಿದೆ' ಎಂದು ತಮ್ಮ ಟ್ವಿಟರ್ ನಲ್ಲಿ ಬರೆದುಕೊಂಡಿದ್ದರು.

ಕಿರಣ್ ರಿಜಿಜು ಹೇಳಿಕೆಯನ್ನು ಸಮರ್ಥಿಸಿಕೊಂಡ ಡಾ ಸುಬ್ರಹ್ಮಣ್ಯ ಸ್ವಾಮಿ ಹಿಂದೂಗಳು ಬಹುಸಂಖ್ಯಾತರಾಗಿರುವುದರಿಂದ ನಮ್ಮ ದೇಶದಲ್ಲಿ ಇನ್ನೂ ಪ್ರಜಾಪ್ರಭುತ್ವ ಇದೆ, ಅದೇ ಮುಸ್ಲಿಂ ರಾಷ್ಟ್ರಗಳಲ್ಲಿ ಮುಸಲ್ಮಾನರ ಸಂಖ್ಯೆ ಅಧಿಕವಾಗಿರುವುದರಿಂದ ಅಲ್ಲಿ ಪ್ರಜಾಪ್ರಭುತ್ವ ಇಲ್ಲ . ನಮ್ಮ ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಮುಂದುವರೆಯಬೇಕಾದರೆ ಹಿಂದೂಗಳು ಬಹುಸಂಖ್ಯಾತರಾಗಿಯೇ ಇರಬೇಕು. ಹಿಂದೂ ನಾಗರೀಕತೆ ಸರಾಗವಾಗಿ ನಡೆಯಬೇಕಾಗಿದ್ದು ಅದನ್ನು ಕಳೆದು ಕೊಳ್ಳಲು ಇಷ್ಟವಿಲ್ಲ ಎಂದಿದ್ದಾರೆ.

ಮುಸಲ್ಮಾನರು ಕೂಡ ಹಿಂದೂಗಳಂತೆ ಕುಟುಂಬ ಯೋಜನೆಯನ್ನು ಅಳವಡಿಸಿಕೊಂಡರೆ ಆಗ ಯಾವುದೇ ಸಮಸ್ಯೆ ಉದ್ಭವಿಸುವುದಿಲ್ಲ, 2001 ಮತ್ತು 2011ರಲ್ಲಿ ನಡೆದ ಜನಗಣತಿಯಲ್ಲಿ ದೇಶದಲ್ಲಿ ಗಣನೀಯವಾಗಿ ಇಳಿಕೆಯಾಗಿದೆ. ಇದು ಹಿಂದೂಗಳಿಗೆ ಎಚ್ಚರಿಕೆಯ ಕರೆಗಂಟೆಯಾಗಿದೆ. ಕಿರಣ್ ರಿಜಿಜು ದೇಶದಲ್ಲಿ ಹಿಂದೂಗಳ ಸಂಖ್ಯೆ ಕ್ಷೀಣಿಸುತ್ತಿದೆ ಎಂದು ಹೇಳಿದ್ದರು, ಅದನ್ನು ತಿರುಚಿ ವಿವಾದ ಸೃಷ್ಟಿಸಲಾಗುತ್ತಿದೆ ಎಂದು ಡಾ ಸುಬ್ರಹ್ಮಣ್ಯ ಸ್ವಾಮಿ ಈ ಸಂದರ್ಭದಲ್ಲಿ ಹೇಳಿದರು.
loading...

No comments